newsics.com
ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಎಲೆಕ್ಷನ್ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಲಿದೆ.
ಇದೇ ವೇಳೆ ಹರಿಯಾಣ ಹಾಗೂ ಜಮ್ಮುಕಾಶ್ಮೀರದ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಿದೆ. ಈ ಎರಡು ರಾಜ್ಯಗಳ ಜೊತೆಗೆ ದೇಶದ ಹಲವು ಭಾಗಗಳಲ್ಲಿ ಮರು ಚುನಾವಣೆಯು ಘೋಷಣೆ ಮಾಡುವ ಸಾಧ್ಯತೆ ಇದೆ.
ಕರ್ನಾಟಕದಿಂದ ಚನ್ನಪ್ಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಹೆಚ್.ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ ತುಕಾರಾಂ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಕ್ಷೇತ್ರಕ್ಕೆ ಬೈಎಲೆಕ್ಷನ್ ನಡೆಯಲಿದೆ.