Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೆ ಭೂಕುಸಿತ: ಬಾಳ್ಳುಪೇಟೆ ಬಳಿಯೇ ನಿಂತ ಬೆಂಗಳೂರು- ಮಂಗಳೂರು ರೈಲು, ಪ್ರಯಾಣಿಕರ ಪರದಾಟ
ಕರ್ನಾಟಕಪ್ರಮುಖ

ಮತ್ತೆ ಭೂಕುಸಿತ: ಬಾಳ್ಳುಪೇಟೆ ಬಳಿಯೇ ನಿಂತ ಬೆಂಗಳೂರು- ಮಂಗಳೂರು ರೈಲು, ಪ್ರಯಾಣಿಕರ ಪರದಾಟ

Share
1 Min Read
SHARE

newsics.com

ಹಾಸನ: ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಭೂಕುಸಿತ ಉಂಟಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ. ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಸಂಚಾರದಲ್ಲಿ ಶುಕ್ರವಾರ ವ್ಯತ್ಯಯವುಂಟಾಗಿದೆ.

ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಇದೀಗ ಮತ್ತೆ ಮಣ್ಣು ಕುಸಿದು ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಕಳೆದ ಎರಡು ಗಂಟೆಯಿಂದ ಬಾಳ್ಳುಪೇಟೆ ಬಳಿ ನಿಂತಿದೆ.

ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ರೈಲು ಸಂಚಾರ ಸ್ಥಗಿತವಾಗಿದ್ದರಿಂದ ನೂರಾರು ಪ್ರಯಾಣಿಕರು ಪರದಾಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ.

ಜುಲೈ 26 ರಂದು ಹಾಸನ ಜಿಲ್ಲೆಯ ಎಡಕುಮೇರಿ ಹಾಗೂ ಕಡಗರವಳ್ಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿ 12 ರೈಲುಗಳು ರದ್ದುಗೊಂಡಿತ್ತು. ಬಳಿಕ ಇದನ್ನು ಸಮರೋಪಾದಿಯಲ್ಲಿ ಹಗಲು ರಾತ್ರಿ ಶ್ರಮವಹಿಸಿ ರೈಲ್ವೆ ವಲಯವು ಸರಿಪಡಿಸಿತ್ತು. ಆಗಸ್ಟ್‌ 8 ರಿಂದ ಮತ್ತೆ ರೈಲು ಸೇವೆ ಆರಂಭಗೊಂಡಿತ್ತು. ಇದಾಗಿ ಎರಡೇ ದಿನಕ್ಕೆ ಮತ್ತೆ ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಬಳ್ಳುಪೇಟೆ ಬಳಿ ಗುಡ್ಡ ಕುಸಿದು ರೈಲ್ವೆ ಹಳಿ ಮೇಲೆ ಬಿದ್ದಿತ್ತು. ಇದರಿಂದಾಗಿ ಈಗ ಮತ್ತೆ ರೈಲು ಸೇವೆ ಬಾಧಿತವಾಗಿತ್ತು. ಆದರೆ ಇದೀಗ ಮತ್ತೆ ಭೂಕುಸಿತ ಪುನರಾವರ್ತನೆಯಾಗಿದ್ದು, ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಯಾರಿಗೆಲ್ಲಾ ಸಿಕ್ತು..?

ಹಾಟ್ ಲುಕ್ ನಲ್ಲಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಸಾರಾ ಅಣ್ಣಯ್ಯ

ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಧರ್ಮದೇಟು

TAGGED:Landslide again: Bangalore-Mangalore train stopped near Ballupetpassengers panic
Share This Article
Facebook Twitter Copy Link Print
Previous Article 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಯಾರಿಗೆಲ್ಲಾ ಸಿಕ್ತು..?
Next Article ಜಗತ್ತಿಗೆ ಮಂಕಿ ಫಾಕ್ಸ್ ಭೀತಿ; WHO ಹೇಳಿದ್ದೇನು?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?