newsics.com
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಪಕ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು(70) ಶನಿವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾದರು.
ಕಳೆದ ಕೆಲವು ದಿನಗಳಿಂದ ಕಾಲಿನ ಗ್ಯಾಂಗ್ರಿನ್‌ನಿಂದ ಬಳಲುತ್ತಿದ್ದರು. ಶನಿವಾರ ರಾತ್ರಿ 7.30ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ವಿಜಯನಗರದ ತಮ್ಮ ಮನೆಯಲ್ಲೇ ಕೊನೆಯುಸಿರೆಳೆದರು.
ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಮಹೇಶ್ ಚಂದ್ರ ಗುರು ತಮ್ಮ ಹೇಳಿಕೆಗಳ ಮೂಲಕ ಹಲವು ಬಾರಿ ವಿವಾದಕ್ಕೆ ಗುರಿಯಾಗಿದ್ದರು.
ಮೈಸೂರು ದಸರಾ ವೇಳೆ ಮಹಿಷ ದಸರಾ ಆಚರಣೆಯ ರೂವಾರಿಯಾಗಿದ್ದ ಮಹೇಶ್ಚಂದ್ರ ಗುರು ಹಲವರ ಕೆಂಗಣ್ಣಿಗೆ ಗುರಿಯಾಗಿದ್ದರು.
ಸಮುದ್ರಕ್ಕೆ ಹಾರಲು ಯತ್ನಿಸಿದವಳ ಜೀವ ಉಳಿಸಿದ ಕ್ಯಾಬ್ ಚಾಲಕ, ವಿಡಿಯೋ ನೋಡಿ