newsics.com
ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ಸಂಪುಟ ಸದಸ್ಯರು ಕೆರಳಿ ಕೆಂಡವಾಗಿದ್ದಾರೆ. ಇಂದು ಸಂಪುಟ ಸಭೆಯಲ್ಲಿ ಭಾಗಿಯಾಗಿದ್ದ ಸಚಿವರೆಲ್ಲರು ಮುಖ್ಯಮಂತ್ರಿ ಪರವಾಗಿರುವುದಾಗಿ ಹೇಳಿದ್ದಾರೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಂಗಳೂರಿಗೆ ಆಗಮಿಸಿದ್ದು ಕುತೂಹಲ ಕೆರಳಿಸಿತ್ತು. ಇದೀಗ ಸಭೆ ಬಳಿಕ ಸದಾಶಿವನಗರದ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಚರ್ಚೆ ಮಾಡಿದ್ದಾರೆ.
ಈ ವೇಳೆ ರಾಜ್ಯಪಾಲರ ನಡೆ ಕುರಿತು ಕಾನೂನು ಹೋರಾಟ ಮಾಡಿ. ನಿಮಗೆ ಹೈಕಮಾಂಡ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿದ್ದರಾಮಯ್ಯಗೆ ಮಲ್ಲಿಕಾರ್ಜುನ ಖರ್ಗೆ ಅಭಯ ನೀಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಹಗರಣಗಳನ್ನ ಚುರುಕುಗೊಳಿಸಿ. ಬಿಜೆಪಿ ಸರ್ಕಾರದ ಹಗರಣದ ತನಿಖಾ ವರದಿ ಸಿದ್ಧವಿದ್ದರೆ ಬಿಡುಗಡೆಗೊಳಿಸಿ ಎಂದು ಸಲಹೆ ನೀಡಿದ್ದಾರೆ.