newsics.com
ಬೆಂಗಳೂರು: ಮುಡಾ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೊರಡಿಸಿದ ಪ್ರಾಸಿಕ್ಯೂಶನ್ ನಿರ್ಣಯವನ್ನು ಕಾಂಗ್ರೆಸ್ ಖಂಡಿಸಿದೆ. ಬಿಜೆಪಿ, ಜೆಡಿಎಸ್ ರಾಜೀನಾಮೆಗೆ ಆಗ್ರಹ ತೀವ್ರಗೊಳಿಸುತ್ತಿದ್ದಂತೆ ಶನಿವಾರ ಸಂಜೆ ಸಚಿವ ಸಂಪುಟ ಸಭೆ ನಡೆಸಿದ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಬಿಜೆಪಿ, ಜೆಡಿಎಸ್ ರಾಜೀನಾಮೆಗೆ ಆಗ್ರಹ ತೀವ್ರಗೊಳಿಸುತ್ತಿದ್ದಂತೆ ಶನಿವಾರ ಸಂಜೆ ಸಚಿವ ಸಂಪುಟ ಸಭೆ ನಡೆಸಿದ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ರಾಜ್ಯಪಾಲರ ಕ್ರಮ ಖಂಡಿಸಿ ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿದೆ. ಇದೇ ವೇಳೆ ಸುದ್ದಿಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ, ಜೆಡಿಎಸ್ ರಾಜೀನಾಮೆಗೆ ಆಗ್ರಹ ತೀವ್ರಗೊಳಿಸುತ್ತಿದ್ದಂತೆ ಶನಿವಾರ ಸಂಜೆ ಸಚಿವ ಸಂಪುಟ ಸಭೆ ನಡೆಸಿದ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ರಾಜ್ಯಪಾಲರ ಕ್ರಮ ಖಂಡಿಸಿ ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿದೆ. ಇದೇ ವೇಳೆ ಸುದ್ದಿಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೂಡ ನಾನ್ಯಾಕೆ ರಾಜೀನಾಮೆ ಕೊಡಲಿ. ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರೇ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.
ರಾಜ್ಯಪಾಲರು ತೀರ್ಮಾನ ಸರಿಯಾಗಿ ಮಾಡಿಲ್ಲ. ಇಡೀ ಸಚಿವ ಸಂಪುಟ, ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿದೆ. ನಮ್ಮ ಸಲಹೆಯನ್ನು ರಾಜ್ಯಪಾಲರು ಪರಿಗಣಿಸಿಲ್ಲ. ಹಿಂದಿನ ಸಂಪುಟ ಸಭೆಯಲ್ಲಿ ನಾವು ಕೈಗೊಂಡ ನಿರ್ಣಯವನ್ನು ರಾಜ್ಯಪಾಲರು ಸ್ವೀಕರಿಸಿಲ್ಲ. ರಾಜಭವನವನ್ನು ದುರುಪಯೋಗ ಮಾಡಿ ನಿರ್ಧಾರ ಹೊರಡಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸಲ್ಲ ಎಂದು ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಏಎ ಅದರ ಕಾಂಗ್ರೆಸ್ ಸರ್ಕಾರ ಬಡವರ ಸರ್ಕಾರ. ನಮ್ಮ ಗ್ಯಾರಂಟಿಗಳಿಗೆ ಪ್ರಧಾನಿ ಮೋದಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ರಾಜಕೀಯ ತೇಜೋವಧೆಗೆ ಮಾಡಿರುವ ಪ್ರಯತ್ನ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜನರ ಆಶೀರ್ವಾದ ನಮ್ಮ ಮೇಲಿದೆ. ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿದ್ದೇವೆ. ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಕೊಟ್ಟಿರುವ ಪಿಟೀಷನ್‌ಗೆ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿಲ್ಲ. ಇಲ್ಲಿ ರಾಜಕೀಯ ದುರುದ್ದೇಶ ಸ್ಪಷ್ಟವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರ ಹವಣಿಸುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ. ರಾಜ್ಯಪಾಲರ ಕಾನೂನುಬಾಹಿರ ನಿರ್ಧಾರವನ್ನು ಇಡೀ ಸಚಿವ ಸಂಪುಟ ಖಂಡಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರದ ಕೈಗೊಂಬೆಯಾಗಿ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ. ಇದನ್ನು ಸಂಪುಟ ಖಂಡಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.