newsics.com
Contents
ಥೈಲ್ಯಾಂಡ್ : ಇಲ್ಲೊಬ್ಬ ವ್ಯಕ್ತಿ ಕೂಡಾ ಕುಡಿದ ಮತ್ತಿನಲ್ಲಿ ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಕೋಪಗೊಂಡ ಹಸು ಆತನನ್ನು ಕೊಂಬಿನಿಂದ ತಿವಿದು ಬಿಸಾಕಿದೆ. ಅಘಾತಕಾರಿ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ.
ಹಸುವಿನ ದಾಳಿಯಿಂದ ಆತನನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.
ಪ್ರವಾಸ ಬಂದಿದ್ದ ರಷ್ಯಾದ 26 ವರ್ಷದ ಕುವ್ಶಿನೋವ್ ಎಂಬಾತ ಕುಡಿದ ಮತ್ತಿನಲ್ಲಿ ಸಂಪೂರ್ಣ ಬೆತ್ತಲಾಗಿ ಹಸುವಿನ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ. ಹಸು ಈ ಕಾಮಾಂಧನ ಮೇಲೆ ಕೊಂಬಿನಿಂದ ಸರಿಯಾಗಿ ದಾಳಿ ನಡೆಸಿದೆ. ಕೊನೆಗೆ ಪೊಲೀಸರು ಸ್ಥಳಕ್ಕಾಗಮಿಸಿ ಆತನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆತನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.