ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಹೃದಯಾಘಾತದಿಂದ ಸಾವು
newsics.com ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾರೆ. ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ. ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಸಂಘದಿಂದ ಸುದ್ದಿಗೋಷ್ಠಿ ನಡೆಯುತ್ತಿರುವಾಗ ಘಟನೆ ನಡೆದಿದೆ. ಹೃದಯಾಘಾತವಾದ ಬಳಿಕ ಕೂಡಲೇ ಹತ್ತಿರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Copy and paste this URL into your WordPress site to embed
Copy and paste this code into your site to embed