Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಗವರ್ನರ್ ಅನುಮತಿ: ಹೈಕೋರ್ಟ್‌ನಲ್ಲಿ ವಾದ- ಪ್ರತಿವಾದ ಹೀಗಿತ್ತು…
ಕರ್ನಾಟಕಪ್ರಮುಖ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಗವರ್ನರ್ ಅನುಮತಿ: ಹೈಕೋರ್ಟ್‌ನಲ್ಲಿ ವಾದ- ಪ್ರತಿವಾದ ಹೀಗಿತ್ತು…

Share
6 Min Read
SHARE

newsics.com

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಂಯ್ಯ ಅವರು ಇಂದು (ಆಗಸ್ಟ್ 19) ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ವಿಚಾರಣೆ ನಡೆಸಿ, ಮುಂದಿನ ವಿಚಾರಣೆಯನ್ನು ಆಗಸ್ಟ್29ಕ್ಕೆ ಮುಂದೂಡಿತು.

ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು.

ರಾಜ್ಯಪಾಲರ ಪರ ವಕೀಲ: ಪ್ರಾಸಿಕ್ಯೂಷನ್ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ನಡೆಸಿದ್ದು, ಆರಂಭದಲ್ಲೇ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಅವರು ವಾದ ಆರಂಭಿಸಿದ್ದು, ವಿಚಾರಣೆ ನಾಳೆಗೆ ನಿಗದಿಪಡಿಸಲು ಮನವಿ ಮಾಡಿದರು. ಇಂದು ಬೆಳಗ್ಗೆ ಅರ್ಜಿಯ ಪ್ರತಿ ರಾಜ್ಯಪಾಲರಿಗೆ ನೀಡಿದ್ದಾರೆ. ಹೀಗಾಗಿ ಅರ್ಜಿ ವಿಚಾರಣೆಗೆ ಕಾಲಾವಕಾಶಕ್ಕೆ ಮನವಿ ಮಾಡಿದರು.

ಸಿಎಂ ಪರ ವಕೀಲ: ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ವಿಚಾರಣೆ ಇದೆ. ಮಧ್ಯಂತರ ಆದೇಶ ಬೇಕಿರುವುದರಿಂದ ಇಂದೇ ವಿಚಾರಣೆ ನಡೆಸಬೇಕು. ರಾಜ್ಯಪಾಲರ ಕಚೇರಿಗೆ ಅರ್ಜಿಯ ಪ್ರತಿ ನೀಡಿದ ಮಾತ್ರಕ್ಕೆ ಅವರ ವಾದ ಕೇಳಬೇಕೆಂದಿಲ್ಲ ಎಂದರು.

ಸಿಎಂ ಪರ ವಕೀಲ: ರಾಜ್ಯಪಾಲರ ಶೋಕಾಸ್‌ ನೋಟಿಸ್‌ಗೆ ಉತ್ತರ ನೀಡಲಾಗಿತ್ತು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ದೂರುಗಳು ದುರುದ್ದೇಶಪೂರಿತ. ಹೀಗಾಗಿ ಶೋಕಾಸ್‌ ನೋಟಿಸ್ ಹಿಂಪಡೆಯುವಂತೆ ಕ್ಯಾಬಿನೆಟ್ ಸಲಹೆ ನೀಡಿದೆ. ಕ್ಯಾಬಿನೆಟ್ ಸಲಹೆ ಪರಿಗಣಿಸದೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಆದೇಶಿಸಿದ್ದಾರೆ. ನೂರು ಪುಟಗಳ ಕ್ಯಾಬಿನೆಟ್ ಸಲಹೆಗೆ ಎರಡು ಪುಟಗಳ ಉತ್ತರ ನೀಡಿದ್ದಾರೆ. ರಾಜ್ಯಪಾಲರು ಒಂದೇ‌ ಒಂದು ಕಾನೂನಿನ ಅಂಶಕ್ಕೆ ಉತ್ತರಿಸಿಲ್ಲ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದೇಕೆಂದು ಕಾರಣ ನೀಡಿಲ್ಲ ಎಂದರು.

ಸಿಎಂ ಪರ ವಕೀಲ: ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದೇಕೆಂದು ಕಾರಣ ನೀಡಿಲ್ಲ. ಸರ್ಕಾರವನ್ನು ಅಸ್ಥಿರಗೊಳಿಸಲು ಇಂತಹ ಕ್ರಮವಾಗುತ್ತಿದೆ. ಸಿಎಂ ರಾಜೀನಾಮೆ ಪಡೆಯಲು ಈಗ ರಾಷ್ಟ್ರಪತಿ ಆಳ್ವಿಕೆ ಅಗತ್ಯವಿಲ್ಲ. ಕೇವಲ ಇಂತಹ ದೂರುಗಳ ಮೂಲಕ ಉದ್ದೇಶ ಈಡೇರುತ್ತಿದೆ. ಸರ್ಕಾರಿ ಸೇವಕನಾಗಿ ಸಿಎಂ ಯಾವುದೇ ಶಿಫಾರಸು ಮಾಡಿಲ್ಲ. ಮುಡಾ ಫೈಲ್‌ಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಸಿಎಂ ಮಾಡಿಲ್ಲ.

ಸಿಎಂ ಪರ ವಕೀಲ: ಹೊಸ ಬಿಎನ್ಎಸ್ ಕಾಯ್ದೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ತಮ್ಮ ಕರ್ತವ್ಯದ ಭಾಗವಾಗಿ ಸಿಎಂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೂ ವಿವೇಚನಾರಹಿತರಾಗಿ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಸಿಎಂ ಪರ ವಕೀಲ: ತಮ್ಮ ಕರ್ತವ್ಯದ ಭಾಗವಾಗಿ ಸಿಎಂ ಯಾವ ತೀರ್ಮಾನ ಕೈಗೊಂಡಿಲ್ಲ. ಆದರೂ ವಿವೇಚನಾರಹಿತರಾಗಿ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ರಾಜ್ಯಪಾಲರು ಆದೇಶ ನೀಡುವಂತಿಲ್ಲ. ಇದಕ್ಕೆ ಮಧ್ಯಪ್ರದೇಶದ ಕೇಸ್ ತೀರ್ಪನ್ನು ಉಲ್ಲೇಖಿಸಿದರು.

ಸಿಎಂ ಪರ ವಕೀಲ: ರಾಜ್ಯಪಾಲರ ಶೋಕಾಸ್ ನೋಟಿಸ್ ನಲ್ಲಿ ಸ್ನೇಹಪ್ರಿಯ ಕೃಷ್ಣ, ಪ್ರದೀಪ್ ಕುಮಾರ್ ದೂರಿನ ಪ್ರಸ್ತಾಪವಿಲ್ಲ. ಕೇವಲ ಟಿ.ಜೆ.ಅಬ್ರಹಾಂ ದೂರಿಗೆ ಸಂಬಂಧಿಸಿದಂತೆ ಮಾತ್ರ ಶೋಕಾಸ್ ನೋಟಿಸ್ ನೀಡಲಾಗಿದೆ. ಆಯ್ಕೆಯಾದ ಸರ್ಕಾರದ ವಿರುದ್ಧ ರಾಜ್ಯಪಾಲರು ಅಂದೇ ತೀರ್ಮಾನ ಕೈಗೊಳ್ಳುತ್ತಾರೆ. ಆದರೆ ಬಾಕಿಯಿದ್ದ 12 ದೂರುಗಳ ಬಗ್ಗೆ ರಾಜ್ಯಪಾಲರು ಕ್ರಮ ಕೈಗೊಂಡಿಲ್ಲ.

ರಾಜ್ಯಪಾಲರ ಪರ ವಕೀಲ: ಕ್ಯಾಬಿನೆಟ್ ನೀಡಿರುವ ಸಲಹೆ ತುಂಬಾ ಕಾನೂನಾತ್ಮಕವಾಗಿದೆ. ಎಲ್ಲಾ ಕಾನೂನಿನ ಪಾಂಡಿತ್ಯ ಇರುವ ಉತ್ತರ ನೀಡಲಾಗಿದೆ ಎಂದು ಸಿಎಂ ಪರ ವಕೀಲ ಸಿಂಘ್ವಿ ವಾದಕ್ಕೆ ತುಷಾರ್ ಮೆಹ್ತಾ ವ್ಯಂಗ್ಯವಾಡಿದ್ದು, ಮಧ್ಯಪ್ರದೇಶ ಕೇಸ್ ತೀರ್ಪನ್ನು ತಪ್ಪಾಗಿ ಉಲ್ಲೇಖಿಸುತ್ತಿದ್ದಾರೆ ಎಂದರು.

ಸಿಎಂ ಪರ ವಕೀಲ: ಸಂವಿಧಾನದ ಆರ್ಟಿಕಲ್ 163ರಡಿ ಕ್ಯಾಬಿನೆಟ್ ತೀರ್ಮಾನ ಒಪ್ಪಬೇಕು. ಆದರೆ ಅದನ್ನು ಒಪ್ಪದೇ ರಾಜ್ಯಪಾಲರು ತೀರ್ಮಾನಿಸಿದ್ದಾರೆಂದೇ ನಂಬೋಣ. ಆದರೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲು ಅವರು ಕಾರಣಗಳನ್ನೇ ನೀಡಿಲ್ಲ.

ನ್ಯಾಯಮೂರ್ತಿ: 17ಎ ಕೇವಲ ಅನುಮತಿ ಅಷ್ಟೇ, 19 ಅಡಿಯ ಸಮ್ಮತಿಯಲ್ಲ. ಭ್ರಷ್ಟಾಚಾರ ತಡೆ ಕಾಯ್ದೆಗೆ 17 ಎ ಯನ್ನು ಇತ್ತೀಚೆಗೆ ಸೇರಿಸಲಾಗಿದೆ. ನೀವು ಓದುತ್ತಿರುವ ತೀರ್ಪು ಬರುವಾಗ ಈ ತಿದ್ದುಪಡಿ ಆಗಿರಲಿಲ್ಲ ಎಂದು ಸಿಂಘ್ವಿ ವಾದಕ್ಕೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪ್ರತಿಕ್ರಿಯಿಸಿದರು.

ಸಿಎಂ ಪರ ವಕೀಲ: ರಾಜ್ಯಪಾಲರು ತಮ್ಮ ವಿವೇಚನೆ ಉಪಯೋಗಿಸಿ ತೀರ್ಮಾನಿಸಬೇಕು. ಕ್ಯಾಬಿನೆಟ್ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿರಲಿಲ್ಲ. ಡಿಸಿಎಂ ನೇತೃತ್ವದಲ್ಲಿ ಬಹಳ ವಿವರವಾದ ಚರ್ಚೆ ನಡೆಸಲಾಗಿದೆ. ಶಂಷೇರ್ ಸಿಂಗ್ ಸೇರಿದಂತೆ ‘ಸುಪ್ರೀಂ’ ತೀರ್ಪುಗಳನ್ನು ಉಲ್ಲೇಖಿಸಿದರು. ಅಲ್ಲದೇ ಯಡಿಯೂರಪ್ಪ ಪ್ರಕರಣದಲ್ಲಿ ನೀಡಿದ್ದ ತೀರ್ಪು ಉಲ್ಲೇಖಿಸಿ ಸಿಂಘ್ವಿ ವಾದ ಮಂಡಿಸಿದರು.

ಸಿಎಂ ಪರ ವಕೀಲ: 1992 ರಲ್ಲಿ ಮುಡಾ ಸ್ವಾಧೀನ 1998 ಡಿನೋಟಿಫಿಕೇಷನ್ ಆಗಿದೆ. 2004ರಲ್ಲಿ ಸಿಎಂ ಮೈದುನನಿಗೆ ಮಾರಾಟವಾಗಿದೆ. 2005ರಲ್ಲಿ ಕೃಷಿ ಜಮೀನಾಗಿ ಪರಿವರ್ತಿಸಲಾಗಿದೆ. 2010 ರಂದು ಸಿಎಂ ಪತ್ನಿಗೆ ಸಹೋದರ ದಾನಪತ್ರ ನೀಡಿದ್ದಾರೆ. ಬಹುತೇಕ ಸಂದರ್ಭಗಳಲ್ಲಿ ಸಿದ್ದರಾಮಯ್ಯ ಅಧಿಕಾರದಲ್ಲಿರಲಿಲ್ಲ. ಯಾವುದೂ ತರಾತುರಿಯಲ್ಲಿ ಆಗಿಲ್ಲ‌. ರಾಜ್ಯಪಾಲರಂತೆ ತರಾತುರಿಯಲ್ಲಿ ಪ್ರಕ್ರಿಯೆ ನಡೆದಿಲ್ಲ. 2020 ರಲ್ಲಿ ಭೂಮಿಗೆ ಪರಿಹಾರವಾಗಿ ನಿವೇಶನ ಹಂಚಲಾಗಿದೆ. 2022 ರಲ್ಲಿ ನಿವೇಶನಗಳಿಗೆ ಕ್ರಯಪತ್ರವಾಗಿದೆ.

ಸಿಎಂ ಪರ ವಕೀಲ: ಜುಲೈ 14 ರಂದು ನ್ಯಾ. ಪಿ.ಎನ್. ದೇಸಾಯಿ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಮುಡಾ ಸಂಬಂಧ ರಾಜ್ಯಪಾಲರು ಕೇಳಿದ್ದ ಪ್ರಶ್ನೆಗಳಿಗೆ ಉತ್ತರಿಸಲಾಗಿದೆ‌. ದೂರುದಾರನ ಹಿನ್ನೆಲೆಯನ್ನು ಪರಿಶೀಲನೆ ಮಾಡಬೇಕಿತ್ತು. ಟಿ.ಜೆ. ಅಬ್ರಹಾಂಗೆ ಸುಪ್ರೀಂ ಕೋರ್ಟ್ ದಂಡ ವಿಧಿಸಿದೆ. ಈ ಎಲ್ಲವನ್ನೂ ಕ್ಯಾಬಿನೆಟ್ ರಾಜ್ಯಪಾಲರಿಗೆ ನೀಡಿದೆ. ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ. ಇವರ ಮೇಲಿನ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿಯನ್ನು ನೀಡಿಲ್ಲ. ಹೊಸ ಬಿಎನ್ ಎಸ್ ಕಾಯ್ದೆಯಡಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ.

ನ್ಯಾಯಮೂರ್ತಿ: ಹೊಸ ಕಾಯ್ದೆಯ ಒಂದು ಬದಲಾವಣೆ ಎಂದರೆ 420 ಈಗ ವಂಚನೆಯಲ್ಲ. ‌ಚಾರ್ ಸೋ ಬೀಸ್ ಅನ್ನು ಈಗ ನಿಂದನೆಯಾಗಿ ಪರಿಗಣಿಸುವಂತಿಲ್ಲ.

ಸಿಎಂ ಪರ ವಕೀಲ: ಸೆಕ್ಷನ್ 17ಎ ಅಡಿ ಪೊಲೀಸ್ ಅಧಿಕಾರಿ ಪ್ರಾಸಿಕ್ಯೂಷನ್ಗೆ ಅನುಮತಿ ಕೇಳಿಲ್ಲ. ಕರ್ತವ್ಯದ ಭಾಗವಾಗಿ ಸಿಎಂ ಮುಡಾ ನಿವೇಶನದ ತೀರ್ಮಾನ ಕೈಗೊಂಡಿಲ್ಲ. ವಿವೇಚನೆ ಬಳಸದೇ ರಾಜ್ಯಪಾಲರು ತೀರ್ಮಾನ ಕೈಗೊಂಡಿದ್ದಾರೆ. ರಾಜ್ಯಪಾಲರು ಇತರೆ ದೂರುಗಳನ್ನು ಬಿಟ್ಟು ಇದನ್ನೇ ಆಯ್ಕೆ ಮಾಡಿದ್ದಾರೆ. ಸೆಲೆಕ್ಟೀವ್ ಆಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ.

ರಾಜ್ಯಪಾಲರ ಪರ ವಕೀಲ: ಕ್ಯಾಬಿನೆಟ್ ನಿರ್ಣಯದ ಉದ್ದೇಶ ಸಿಎಂ ರಕ್ಷಿಸುವುದಾಗಿರಬಹುದು. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಜ್ಯಪಾಲರಿಗೆ ಸ್ವತಂತ್ರ ಅಧಿಕಾರವಿದೆ. ಐವರು ನ್ಯಾಯಮೂರ್ತಿಗಳ ಪೀಠ ರಾಜ್ಯಪಾಲರ ಪರ ತೀರ್ಪು ನೀಡಿದೆ. ಎಲ್ಲ ಕಾರಣಗಳನ್ನು ನೀಡಿಯೇ ರಾಜ್ಯಪಾಲರು ತೀರ್ಮಾನಿಸಿದ್ದಾರೆ. ಹೀಗಾಗಿ ಯಾವುದೇ ಮಧ್ಯಂತರ ತಡೆ‌ ನೀಡಬಾರದು. ನಾನು ನನ್ನ ವಾದ ಗುರುವಾರ ಮುಂದುವರಿಸುತ್ತೇನೆ.

ನ್ಯಾಯಮೂರ್ತಿ: ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಲಿದೆ. ಆ‌ ಕೋರ್ಟ್ ಆದೇಶ‌ ನೀಡಿದರೆ ಸಮಸ್ಯೆ ಆಗಬಹುದಲ್ಲವೇ?

ನ್ಯಾಯಮೂರ್ತಿ: ಸೂಕ್ತ ಮಧ್ಯಂತರ ಆದೇಶ ನೀಡಲಾಗುವುದು. ಎಲ್ಲಾ ಪ್ರತಿವಾದಿಗಳೂ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಿ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪ್ರಕ್ರಿಯೆ ಹೈಕೋರ್ಟ್ ವಿಚಾರಣೆಗೆ ಅಡ್ಡಿಯಾಗಬಾರದು.

ದೂರುದಾರರ ಪರ ಪ್ರಭುಲಿಂಗ್ ನಾವದಗಿ: ರಾಜ್ಯಪಾಲರ ಆದೇಶಕ್ಕೆ ತಡೆಯಾಜ್ಞೆ ನೀಡಬಾರದು ಎಂದು ಸತ್ಯನಾರಾಯಣ ಶರ್ಮಾ ಕೇಸ್ ಉಲ್ಲೇಖಿಸಿ ವಾದಮಂಡನೆ ಮಾಡಿದರು.

ಸಿಎಂ ಪರ ವಕೀಲ : ನಾಳೆ ಕೋರ್ಟ್ ಆದೇಶ ನೀಡಿದರೆ ಸಮಸ್ಯೆ ಆಗಲಿದೆ. ರಾಜ್ಯಪಾಲರ ಅನುಮತಿ ಬಗ್ಗೆ ವಿಚಾರಣಾ ನ್ಯಾಯಾಲಯ ತೀರ್ಮಾನಿಸಲಿ ಎಂದರು.

ದೂರುದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ್: ರಾಜ್ಯಪಾಲರ ಆದೇಶದ ಬಗ್ಗೆ ಜಿಲ್ಲಾ ಕೋರ್ಟ್ ತೀರ್ಮಾನಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು.

ನ್ಯಾಯಮೂರ್ತಿ: ಸಾಂವಿಧಾನಿಕ ಕೋರ್ಟ್ ಆದ ಹೈಕೋರ್ಟ್ ತೀರ್ಮಾನಿಸಬೇಕಲ್ಲವೇ?

ಸಿಎಂ ಪರ ವಕೀಲ: ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಲು ಮನವಿ ಮಾಡಿದರು.

ನ್ಯಾಯಮೂರ್ತಿ: ಎಲ್ಲರ ವಾದಗಳನ್ನು ಆಲಿಸಿದ್ದೇನೆ. ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಲಿದೆ. ನಾಳೆ ಆದೇಶ ನೀಡಿದರೆ ಹೈಕೋರ್ಟ್ ಪ್ರಕ್ರಿಯೆ ನಿಷ್ಪಲವಾಗಲಿದೆ. ಹೀಗಾಗಿ ಆಗಸ್ಟ್ 29 ರವರೆಗೆ ವಿಚಾರಣೆ ಮುಂದೂಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹೈಕೋರ್ಟ್ ಸೂಚನೆ ನೀಡಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ತಕ್ಷಣ ಕ್ರಮ ಬೇಡ: ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಹೃದಯಾಘಾತದಿಂದ ಸಾವು

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌; ಜಸ್ಟ್ 30 ಸಾವಿರಕ್ಕೆ ಸಿಗುತ್ತೆ 10 ಗ್ರಾಂ ಬಂಗಾರ! 

ಅಪ್ಪ ಆಗೋಕೆ ಆಗ್ತಿಲ್ವಾ? ಪುರುಷರೇ ಈ ಆಹಾರ ತಿನ್ನಿ! 

TAGGED:Prosecution of Governor against CM: Argument and counter-argument in High Court was like this...
Share This Article
Facebook Twitter Copy Link Print
Previous Article ಸಿಎಂ ಸಿದ್ದರಾಮಯ್ಯ ವಿರುದ್ಧ ತಕ್ಷಣ ಕ್ರಮ ಬೇಡ: ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ
Next Article ಮೆಟ್ರೋ ಹಸಿರು ಮಾರ್ಗದ ರೈಲು ಸಂಚಾರ ಈ ಐದು ದಿನ ಸ್ಥಗಿತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?