newsics.com
ತೆಲಂಗಾಣ: ಗರ್ಭಿಣಿ ಮಹಿಳೆಯೊಬ್ಬರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಹಿಳಾ ಕಂಡಕ್ಟರ್ ಒಬ್ಬರು ನರ್ಸ್ ಸಹಾಯದಿಂದ ಮಹಿಳೆಗೆ ಅದೇ ಬಸ್ಸಿನಲ್ಲಿ ಸುಸೂತ್ರವಾಗಿ ಹೆರಿಗೆ ಮಾಡಿಸಿದ್ದಾರೆ. ಈ ಸುದ್ದಿ ಇದೀಗ ಭಾರೀ ವೈರಲ್ ಆಗುತ್ತಿದೆ.
ಈ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಸಂಧ್ಯಾ ಎಂದು ಗುರುತಿಸಲಾಗಿರುವ ತುಂಬು ಗರ್ಭಿಣಿ ಮಹಿಳೆ ತನ್ನ ಕುಟುಂಬದೊಂದಿಗೆ ರಕ್ಷಾ ಬಂಧನವನ್ನು ಆಚರಿಸಲು ಮಹಬೂಬ್‌ನಗರ ಜಿಲ್ಲೆಯ ವನಪರ್ತಿಗೆ ಪ್ರಯಾಣಿಸುತ್ತಿದ್ದರು . ಬಸ್ ನಾಚಹಳ್ಳಿ ಸಮೀಪಿಸುತ್ತಿದ್ದಂತೆ ಆಕೆಗೆ ಇದ್ದಕ್ಕಿದ್ದಂತೆ ಹೆರಿಗೆ ನೋವು ಕಾಣಿಸಿಕೊಂಡಿದೆ.
ಸಂಧ್ಯಾ ನೋವಿನಿಂದ ನರಳುತ್ತಿದ್ದುದನ್ನು ಗಮನಿಸಿದ ಮಹಿಳಾ ಕಂಡಕ್ಟರ್ ಜಿ ಭಾರತಿ ನಾಚಹಳ್ಳಿ ಬಳಿ ಬಸ್ ನಿಲ್ಲಿಸಿದ್ದಾರೆ. ಮತ್ತು ತನ್ನ ಸಮಯ ಪ್ರಜ್ಞೆಯಿಂದ ಆ ಬಸ್ಸಿನಲ್ಲಿದ್ದ ನರ್ಸ್ ಸಹಾಯದಿಂದ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.