newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮನೆ ಊಟ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮನೆ ಊಟ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ನಟ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಆದರೆ, ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದೆ.
ರಾಜ್ಯದ ಎಲ್ಲಾ ಕಾರಾಗೃಹಗಳಲ್ಲೂ ಕೈದಿಗಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಹೀಗಾಗಿ ದರ್ಶನ್ ಮನೆಯೂಟ ಕೋರಿದ ಅರ್ಜಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಜೈಲಾಧಿಕಾರಿಗಳು ವರದಿ ನೀಡಿರುವುದಾಗಿ ಜಸ್ಟೀಸ್ ಎಂ ನಾಗಪ್ರಸನ್ನ ಅವರಿಗೆ ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ಮಾಹಿತಿ ನೀಡಿದರು. ಈ ವೇಳೆ ವೈದ್ಯಾಧಿಕಾರಿಗಳ ವರದಿ ನೋಡಿ ವಾದ ಮಂಡನೆಗೆ ದರ್ಶನ್ ಪರ ವಕೀಲೆ ಸಂಜೀವಿನಿ ನಾವದಗಿ ಸಮಯ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದರು.