newsics.com
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ರಾಜ್ಯ ಹವಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಕರಾವಳಿ ಒಳನಾಡಿನಲ್ಲಿ ಮಾರುತದ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿಯಲ್ಲಿ ಮಳೆಯಾಗಲಿದೆ.
ಇಂದು ಮತ್ತು ನಾಳೆ ಎರಡು ದಿನ ರಾಜ್ಯದೆಲ್ಲೆಡೆ ಮಳೆಯ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲೂ ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದೆ.