Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್‌ಗೆ ದೀದಿ ಆಪ್ತರ ಪ್ರಶ್ನೆ
ದೇಶಪ್ರಮುಖ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್‌ಗೆ ದೀದಿ ಆಪ್ತರ ಪ್ರಶ್ನೆ

Share
2 Min Read
SHARE

newsics.com

ನವದೆಹಲಿ: ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ (CM Siddaramaiah) ಸಂಕಷ್ಟ ಎದುರಾಗಿದೆ.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅನುಮತಿ ನೀಡಿದ್ದಾರೆ. ಇದಕ್ಕೆ‌ ಕಾಂಗ್ರೆಸ್ ಕೆಂಡಾಮಂಡಲವಾಗಿದ್ದು, ರಾಜ್ಯಪಾಲರ ವಿರುದ್ಧ ಕಿಡಿಕಾರುತ್ತಿದೆ.

ಈ‌ ಮಧ್ಯೆ, ಮುಡಾ ಹಗರಣ ರಾಷ್ಟ್ರಮಟ್ಟದಲ್ಲೂ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್‌ಗೆ ಮುಜುಗರ ಎದುರಾಗಿದೆ. ಅತ್ತ ಕಾಂಗ್ರೆಸ್‌ ನೇತೃತ್ವದ I.N.D.I.A. ಒಕ್ಕೂಟದ ಮಿತ್ರಪಕ್ಷ, ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಟಿಎಂಸಿ (TMC) ಕೂಡ ಕಾಂಗ್ರೆಸ್‌ಗೆ ಸವಾಲು ಹಾಕಿದೆ.

ರಾಹುಲ್ ಗಾಂಧಿ ಅವರು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುತ್ತಾರೆಯೇ ಎಂದು ಟಿಎಂಸಿ ನಾಯಕರು ಪ್ರಶ್ನಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮೇಲೆ ಕಾಂಗ್ರೆಸ್ ಕಿಡಿಕಾರಿತ್ತು. ಸಂತ್ರಸ್ತೆಗೆ ನ್ಯಾಯ ಒದಗಿಸುವ ಬದಲು ಆರೋಪಿಯನ್ನು ರಕ್ಷಿಸುವ ಪ್ರಯತ್ನವು ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತದ ಮೇಲೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಖುದ್ದು ರಾಹುಲ್ ಗಾಂಧಿ ಅವರೇ ಟ್ವೀಟ್ ಮಾಡಿದ್ದರು.

ಇದೀಗ ರಾಹುಲ್ ಗಾಂಧಿ ವಿರುದ್ಧ ಟಿಎಂಸಿ ನಾಯಕರು ಕಿಡಿಕಾರಿದ್ದಾರೆ. ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬಂದಿರುವ ಮುಡಾ ಆರೋಪ ಪ್ರಸ್ತಾಪಿಸಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್‌ ಪಾರ್ಟಿಗೆ ಟಿಎಂಸಿ ಟಾಂಗ್ ಕೊಟ್ಟಿದೆ.

ರಾಹುಲ್ ಗಾಂಧಿ ವಿರುದ್ಧ ಟಿಎಂಸಿ ನಾಯಕ, ರಾಜ್ಯಸಭಾ ಮಾಜಿ ಸದಸ್ಯ ಕುನಾಲ್ ಘೋಷ್ ಕಿಡಿಕಾರಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿರುವ ಕುರಿತು ಸುದ್ದಿ ಲೇಖನದ ಕ್ಲಿಪ್ ಅನ್ನು ಅವರು ಪೋಸ್ಟ್ ಮಾಡಿದ್ದಾರೆ.

ಹಾಗಾದರೆ, @ರಾಹುಲ್ ಗಾಂಧಿ ಜೀ, ನೀವು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತೀರಾ? ಇದೊಂದು ಘೋರ ಭ್ರಷ್ಟಾಚಾರದ ಆರೋಪ. ಪಶ್ಚಿಮ ಬಂಗಾಳದ ಘಟನೆಯ ಬಗ್ಗೆ ಸರಿಯಾದ ಮಾಹಿತಿಯಿಲ್ಲದೆ, ಮಮತಾ ಬ್ಯಾನರ್ಜಿ ಅವರು ತೆಗೆದುಕೊಂಡ ಕ್ರಮಗಳನ್ನು ತಿಳಿಯದೆ, ನೀವು ಸಾಮಾಜಿಕ ಮಾಧ್ಯಮದಲ್ಲಿ ಕಮೆಂಟ್ ಮಾಡಿದ್ದೀರಿ. ಈಗ ನಿಮ್ಮ ಸಿಎಂ ಬಗ್ಗೆ ನೀವು ಕ್ರಮ ಕೈಗೊಳ್ಳುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನಡುವೆ ಅಂತರ ಕಾಣಿಸುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಹೇಳಿಕೆಯು ಎರಡು ಪಕ್ಷಗಳ ನಡುವಿನ ಘರ್ಷಣೆಗೆ ಮತ್ತಷ್ಟು ತುಪ್ಪ ಸುರಿದಿದೆ.

ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!

ವಿವಿಧ ಮಾಧ್ಯಮಗಳಿಂದ ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಗುರುತು ತೆಗೆಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ

ವಯಸ್ಸಾದರೂ ಯಂಗ್ ಆಗಿ ಕಾಣಬೇಕೆ? ಇದು ನಿಮಗಾಗಿ…

22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್

TAGGED:Rahul ji?: Question from Didi's supporters to CongressWill you ask for CM Siddaramaiah's resignation
Share This Article
Facebook Twitter Copy Link Print
Previous Article ವಿವಿಧ ಮಾಧ್ಯಮಗಳಿಂದ ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಗುರುತು ತೆಗೆಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ
Next Article ಇಂದು ಭಾರತ್ ಬಂದ್: ರಾಜ್ಯದಲ್ಲಿ ಶಾಲೆಗಳಿಗೆ ರಜೆ ಇದ್ಯಾ?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?