ಬಸ್ ಪಲ್ಟಿ: 35 ಯಾತ್ರಾರ್ಥಿಗಳು ಸಾವು, 18‌ ಮಂದಿಗೆ ಗಾಯ

newsics.com ಇರಾನ್: ಇರಾಕ್‌ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಬಸ್ ಇರಾನ್‌ನ ಯಾಜ್ದ್ ಪ್ರಾಂತ್ಯದಲ್ಲಿ ಉರುಳಿಬಿದ್ದ ಪರಿಣಾಮ ಕನಿಷ್ಠ 35 ಪ್ರಯಾಣಿಕರು ಮೃತಪಟ್ಟಿದ್ದಾರೆ. ಕನಿಷ್ಟ 18 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಬಸ್ಸಿನಲ್ಲಿ 53 ಪ್ರಯಾಣಿಕರು ಇದ್ದರು. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಲರ್ಕಾನಾ ನಗರದವರು. ಇರಾನ್‌ನ ಸರ್ಕಾರಿ ಸ್ವಾಮ್ಯದ ಐಆರ್‌ಎನ್ಎ ಸುದ್ದಿ ಸಂಸ್ಥೆ ಪ್ರಕಾರ, ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ಶಿಯಾ ಯಾತ್ರಿಕರು ಇರಾನ್‌ನ ಪವಿತ್ರ ನಗರವಾದ ಕೋಮ್‌ಗೆ ತೆರಳಿದ್ದರು. ಪಾಕಿಸ್ತಾನದಿಂದ … Continue reading ಬಸ್ ಪಲ್ಟಿ: 35 ಯಾತ್ರಾರ್ಥಿಗಳು ಸಾವು, 18‌ ಮಂದಿಗೆ ಗಾಯ