newsics.com
ನಟಿ ಶ್ರದ್ಧಾ ಕಪೂರ್ ಅವರಿಗೆ ‘ಸ್ತ್ರೀ 2’ ಸಿನಿಮಾದಿಂದ ಸೂಪರ್ ಡೂಪರ್ ಸಕ್ಸಸ್ ಸಿಕ್ಕಿದೆ. ಇದರಿಂದಾಗಿ ಶ್ರದ್ಧಾ ಕಪೂರ್ ಜನಪ್ರಿಯತೆ ಹೆಚ್ಚಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇನ್ಸ್ಟಾಗ್ರಾಮ್ ಬಳಕೆಯಲ್ಲಿ ಶ್ರದ್ಧಾ ಕಪೂರ್ ಆ್ಯಕ್ಟಿವ್ ಆಗಿದ್ದಾರೆ. ಅವರನ್ನು ಬರೋಬ್ಬರಿ 91.6 ಮಿಲಿಯನ್ (9.16 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.
ಅಚ್ಚರಿಯೆಂದರೆ, ಪ್ರಧಾನಿ ನರೇಂದ್ರ ಮೋದಿ ಅವರಿಗಿಂತಲೂ ಶ್ರದ್ಧಾ ಕಪೂರ್ ಅವರಿಗೇ ಹೆಚ್ಚು ಫಾಲೋವರ್ಸ್ ಇದ್ದಾರೆ!
ಪ್ರಧಾನಿ ನರೇಂದ್ರ ಮೋದಿ ಅವರನ್ನು 91.3 ಮಿಲಿಯನ್ (9.13 ಕೋಟಿ) ಜನರು ಇನ್ಸ್ಟಾಗ್ರಾಮ್ನಲ್ಲಿ ಫಾಲೋ ಮಾಡುತ್ತಿದ್ದಾರೆ. ಅವರನ್ನು ಹಿಂದಿಕ್ಕುವ ಮೂಲಕ ಶ್ರದ್ಧಾ ಕಪೂರ್ ಅವರು ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
ಎರಡನೇ ಸ್ಥಾನದಲ್ಲಿ ಪ್ರಿಯಾಂಕಾ ಚೋಪ್ರಾ ಹಾಗೂ ಮೊದಲ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದಾರೆ. ಪ್ರಿಯಾಂಕಾ ಚೋಪ್ರಾ ಅವರಿಗೆ 91.8 ಮಿಲಿಯನ್ ಮತ್ತು ವಿರಾಟ್ ಕೊಹ್ಲಿ ಅವರಿಗೆ 270 ಮಿಲಿಯನ್ ಫಾಲೋವರ್ಸ್ ಇದ್ದಾರೆ.
ಬಾಲಿವುಡ್‌ನ ಜನಪ್ರಿಯ ನಟಿ ಆಲಿಯಾ ಭಟ್ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ 85.1 ಮಿಲಿಯನ್ ಫಾಲೋವರ್ಸ್ ಇದ್ದಾರೆ. ದೀಪಿಕಾ ಪಡುಕೋಣೆ ಅವರನ್ನು 79.8 ಮಿಲಿಯನ್ ಜನರು ಫಾಲೋ ಮಾಡುತ್ತಿದ್ದಾರೆ. ಇವರಿಬ್ಬರ ನಂತರದ ಸ್ಥಾನ ಶ್ರದ್ಧಾ ಕಪೂರ್ ಅವರಿಗೆ ಸಿಕ್ಕಿದೆ.
ಬಾಲಿವುಡ್ನಲ್ಲಿ ಬಹುಬೇಡಿಕೆಯ ನಟಿಯಾಗಿ ಶ್ರದ್ಧಾ ಕಪೂರ್ ಗುರುತಿಸಿಕೊಂಡಿದ್ದಾರೆ. ‘ಸ್ತ್ರೀ 2’ ಸಿನಿಮಾದ ಯಶಸ್ಸಿನಿಂದ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.
ಆಗಸ್ಟ್ 15ರಂದು ‘ಸ್ತ್ರೀ 2’ ಸಿನಿಮಾ ಬಿಡುಗಡೆಯಾಗಿದ್ದು, ಹಾರರ್ ಕಥೆ ಹೊಂದಿರುವ ಸಿನಿಮಾ ಇದಾಗಿದೆ. 2018ರಲ್ಲಿ ‘ಸ್ತ್ರೀ’ ಬಿಡುಗಡೆ ಆಗಿತ್ತು. ಅದರ ಮುಂದುವರಿದ ಕಥೆ ‘ಸ್ತ್ರೀ 2’ ಸಿನಿಮಾದಲ್ಲಿದೆ.
ರಾಜ್ಕುಮಾರ್ ರಾವ್, ಅಭಿಷೇಕ್ ಬ್ಯಾನರ್ಜಿ, ತಮನ್ನಾ ಭಾಟಿಯಾ, ವರುಣ್ ಧವನ್, ಪಂಕಜ್ ತ್ರಿಪಾಠಿ ಮುಂತಾದ ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಅಮರ್ ಕೌಶಿಕ್ ಅವರು ನಿರ್ದೇಶನ ಮಾಡಿದ್ದಾರೆ.
ವಿಶ್ವ ಬಾಕ್ಸ್ ಆಫೀಸ್ನಲ್ಲಿ ಈಗಾಗಲೇ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಈ ಸಿನಿಮಾ ಮುನ್ನುಗ್ಗುತ್ತಿದೆ.
https://www.instagram.com/p/C-kveFrPY3B/?utm_source=ig_web_button_share_sheet
ಲಿಪ್ ಲಾಕ್ ಮಾಡುವಾಗ ಪ್ರಿಯತಮೆ ಬಾಯಿಗೇ ವಾಂತಿ ಮಾಡಿದ ಪ್ರಿಯಕರ! ವೈರಲ್ ವಿಡಿಯೋ ನೋಡಿ