Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದು ರಾಜೀನಾಮೆಗೂ ಮುನ್ನವೇ ಶುರುವಾಯ್ತು ಸಿಎಂ ಕುರ್ಚಿ ಚರ್ಚೆ! ಯಾರಾಗ್ತಾರೆ ಮುಂದಿನ ಮುಖ್ಯಮಂತ್ರಿ?
ಕರ್ನಾಟಕಪ್ರಮುಖ

ಸಿದ್ದು ರಾಜೀನಾಮೆಗೂ ಮುನ್ನವೇ ಶುರುವಾಯ್ತು ಸಿಎಂ ಕುರ್ಚಿ ಚರ್ಚೆ! ಯಾರಾಗ್ತಾರೆ ಮುಂದಿನ ಮುಖ್ಯಮಂತ್ರಿ?

Share
2 Min Read
SHARE

newsics.com
ಬೆಂಗಳೂರು: ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವಂತಾದರೆ ಮುಂದ್ಯಾರು ಎಂಬ ಚರ್ಚೆ ಈಗಾಗಲೇ ಕಾಂಗ್ರೆಸ್ ವಲಯದಲ್ಲಿ ಚರ್ಚೆ ಶುರುವಾಗಿದ್ದು, ಸಿಎಂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಮ್ಮ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ವಿರುದ್ಧ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಂಥ ಹಿರಿಯ ಅನುಭವಿ ನ್ಯಾಯವಾದಿಗಳು ವಾದ ಮಂಡಿಸುತ್ತಿದ್ದರೂ ಕೂಡ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆಯುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಾದರೆ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಮರ್ಥರಾಗಿರುತ್ತಾರೆಯೇ ಎಂಬ ಬಗ್ಗೆ ನಿರ್ಣಾಯಕ ಪ್ರಶ್ನೆ ಎದ್ದಿದೆ.
ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್‌ ಪಕ್ಷದೊಳಗೆ ಆಂತರಿಕ ಬೆಳವಣಿಗೆಗಳು ಜೋರಾಗಿಯೇ ನಡೆಯುತ್ತಿವೆ. ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಒಂದು ಕಾಲದ ತಮ್ಮ ಪ್ರತಿಸ್ಪರ್ಧಿ ಸತೀಶ್ ಜಾರಕಿಹೊಳಿ ಅವರನ್ನು ಗುಪ್ತವಾಗಿ ಭೇಟಿ ಮಾಡಿ ಸುಮಾರು 40 ನಿಮಿಷಗಳ ಖಾಸಗಿ ಚರ್ಚೆ ನಡೆಸಿದ್ದಾರೆ. ಉಳಿದವರನ್ನು ಬಿಟ್ಟು ಈ ಇಬ್ಬರೇ ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಸತೀಶ್‌ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅದರ ಸಂಬಂಧವೇ ಇಬ್ಬರೂ ಭೇಟಿ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸತೀಶ್ ಜಾರಕಿಹೊಳಿ ಅವರ ಸಹೋದರ ರಮೇಶ್ ಜಾರಕಿಹೊಳಿ ಅವರ ವಿವಾದಾತ್ಮಕ ವೀಡಿಯೊ ಕಾಣಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಸಂಬಂಧ ಸುಧಾರಿಸಿತ್ತು.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೆ ರಾಜ್ಯಕ್ಕೆ ಭಾರೀ ಸವಾಲು ಎದುರಾಗಲಿದೆ ಎಂದು ರಮೇಶ್ ಜಾರಕಿಹೊಳಿ ಇತ್ತೀಚೆಗೆ ಪ್ರತಿಕ್ರಿಯಿಸಿದ್ದರು. ಇವೆಲ್ಲಾ ಬೆಳವಣಿಗೆ ಬಗ್ಗೆ ಚರ್ಚಿಸಲು ಮತ್ತು ಮುಂದಿನ ಕ್ರಮ ಕೈಗೊಳ್ಳಲು ಉಭಯ ನಾಯಕರು ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕೆಲ ವರ್ಷಗಳ ಹಿಂದೆ ಬೆಳಗಾವಿ ರಾಜಕೀಯ ಮತ್ತು ಸಹಕಾರಿ ಬ್ಯಾಂಕ್‌ಗಳ ಹಿಡಿತದ ವಿಚಾರದಲ್ಲಿ ಇಬ್ಬರ ನಡುವೆ ಜಟಾಪಟಿ ನಡೆದಿತ್ತು. ಈ ಎಲ್ಲಾ ವೈಷಮ್ಯಗಳನ್ನು ಮರೆದು ಮುಂದಿನ ದಿನಗಳಲ್ಲಿ ಒಗ್ಗಟ್ಟಿನಿಂದ ಮುನ್ನಡೆಯೋಣ ಎಂದು ಸಾರಲು ಇಬ್ಬರೂ ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಉಭಯ ನಾಯಕರು ಈ ಹಿಂದೆ ಹಲವು ಬಾರಿ ಭೇಟಿಯಾಗಿದ್ದರೂ ಮಂಗಳವಾರದ ಸಭೆ ಸಾಕಷ್ಟು ಗಮನ ಸೆಳೆದಿದೆ ಎಂದು ಸತೀಶ್ ಜಾರಕಿಹೊಳಿ ಅವರ ಆಪ್ತ ಮೂಲಗಳು ತಿಳಿಸಿವೆ.

ಡಿ. ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರು ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಸೋತರೆ, ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಗೆದ್ದಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮಗ ಮೃಣಾಲ್‌ಗೆ ಸಹಾಯ ಮಾಡಲು ಶಿವಕುಮಾರ್ ಅವರ ಪ್ರಯತ್ನವೂ ವಿಫಲವಾಯಿತು. ಹೀಗಿರುವಾಗ ಇಬ್ಬರ ಭೇಟಿ ಮತ್ತು ಮಾತುಕತೆಯು ಕಾಂಗ್ರೆಸ್‌ನೊಳಗಿನ ಪ್ರಮುಖ ಬೆಳವಣಿಗೆಗಳನ್ನು ಸೂಚಿಸುತ್ತದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬದಲಾವಣೆಯಾದರೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷ ಜಿ.ಪರಮೇಶ್ವರ ಸೇರಿದಂತೆ ಸಂಭಾವ್ಯರ ಪಟ್ಟಿ ಇದೆ.

ಆದರೆ ಶಿವಕುಮಾರ್ ಅವರು ಸಿಎಂ ಆಗುವ ಮಹತ್ವಾಕಾಂಕ್ಷೆಯನ್ನು ಈಡೇರಿಸಲು ಬಯಸಿದರೆ, ಸತೀಶ್ ಜಾರಕಿಹೊಳಿ ಅವರ ಬೆಂಬಲವು ನಿರ್ಣಾಯಕವಾಗಿದೆ. ಏಕೆಂದರೆ ಅವರು ಕಾಂಗ್ರೆಸ್ ಮತ್ತು ಬಿಜೆಪಿಯ 15-20 ಶಾಸಕರನ್ನು ನಿಯಂತ್ರಿಸುವ ಶಕ್ತಿ, ಸಾಮರ್ಥ್ಯ ಹೊಂದಿರುವುದೇ ಇದಕ್ಕೆ ಕಾರಣವಾಗಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್‌ಗೆ ದೀದಿ ಆಪ್ತರ ಪ್ರಶ್ನೆ

ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!

22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್

ವಯಸ್ಸಾದರೂ ಯಂಗ್ ಆಗಿ ಕಾಣಬೇಕೆ? ಇದು ನಿಮಗಾಗಿ…

ಮಾಗಿದ ಬಾಳೆಹಣ್ಣು ತಿಂದ್ರೆ ಏನಾಗತ್ತೆ?

TAGGED:The CM chair lobby started even before Siddu's resignation!
Share This Article
Facebook Twitter Copy Link Print
Previous Article ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು
Next Article ಬಸ್ ಪಲ್ಟಿ: 35 ಯಾತ್ರಾರ್ಥಿಗಳು ಸಾವು, 18‌ ಮಂದಿಗೆ ಗಾಯ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?