newsics.com
ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪದಡಿ ಎಫ್ಐಆರ್ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಇಂದು ಎರಡೂ ಗಂಟೆಗೂ ಹೆಚ್ಚು ಕಾಲ ವಿಚಾರಣೆಗೆ ಒಳಪಡಿಸಿದರು.
ಬಳಿಕ ಮಾತನಾಡಿದ ಡಿಕೆಶಿ, “ಬುಧವಾರ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆಲಮಟ್ಟಿ ಜಲಾಶಯ ಬಾಗಿನ ಅರ್ಪಣೆ ಹಿನ್ನೆಲೆಯಲ್ಲಿ ಸಮಯಾವಕಾಶ ಪಡೆದು ಇಂದು ವಿಚಾರಣೆ ಎದುರಿಸಿದ್ದೇನೆ. ಲೋಕಾಯುಕ್ತ ಅಧಿಕಾರಿಗಳು ಎರಡ್ಮೂರು ಗಂಟೆ ವಿಚಾರಣೆ ಮಾಡಿದರು. ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಕರೆದು ಏನೇನೋ ಪ್ರಶ್ನೆ ಕೇಳಿ ಹಿಂಸೆ ಕೊಟ್ಟಿದ್ದಾರೆ. ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಕೆಲ ಪ್ರಶ್ನೆಗಳಿಗೆ ದಾಖಲೆ ರೂಪದಲ್ಲಿ ಉತ್ತರಿಸುವುದಾಗಿ ತಿಳಿಸಿದ್ದೇನೆ ಎಂದಿದ್ದಾರೆ.
ವಿಚಾರಣೆಗೆ ಕರೆದಾಗ ಬರಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ. ಇವರಿಗಿಂತ (ಲೋಕಾಯುಕ್ತ ಇಲಾಖೆ) ಸಿಬಿಐನವರೇ ಪರವಾಗಿಲ್ಲ. ಏಕೆಂದರೆ ಆರೋಪ ಸಂಬಂಧ ಸಿಬಿಐ ಅಧಿಕಾರಿಗಳು ಒಂದು ದಿನವೂ ವಿಚಾರಣೆಗೆ ಕರೆದಿಲ್ಲ, ಪ್ರಶ್ನೆ ಕೇಳಿಲ್ಲ” ಎಂದು ಪ್ರತಿಕ್ರಿಯಿಸಿದರು.