newsics.com
ಮಂಡ್ಯ: ಕರ್ನಾಟಕ ಸರ್ಕಾರವನ್ನು ( ಬೀಳಿಸಲು ಸಂಚು ನಡೆಯುತ್ತಿದೆ. ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿಯವರು 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ, ಅಲುಗಾಡಿಸಲು ಆಗಲ್ಲ. ಆದರೆ, ಬಿ.ಎಲ್.ಸಂತೋಷ್, ಶೋಭಾ ಕರಂದ್ಲಾಜೆ, ಹೆಚ್.ಡಿ.ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಲಾಗುತ್ತಿದೆ. ಕಾಂಗ್ರೆಸ್ ಐದು ವರ್ಷ ಅಧಿಕಾರದಲ್ಲಿರುತ್ತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂದು ಹೇಳಿದರು.
ಸರ್ಕಾರ ಬೀಳಿಸುವುದಾಗಿ ಪ್ರಧಾನಿ ಮೋದಿ ಅವರಿಗೆ ಐದು ಜನ ಮಾತು ಕೊಟ್ಟಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯ ಬ್ರೋಕರ್ಗಳು ಡಿಮ್ಯಾಂಡ್ ಮಾಡುತ್ತಿದ್ದಾರೆ. ನಿತ್ಯ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ, ನಮ್ಮ ಶಾಸಕರು ಬಲಿಯಾಗಲ್ಲ. ನಾವು ಸಾಕ್ಷಿ ಕಲೆ ಹಾಕುತ್ತಿದ್ದೇವೆ, ಇಡಿ ಅಧಿಕಾರಿಗಳಿಗೆ ಕೊಡುತ್ತೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಇದೆ. ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯ ಯಾರಿಗೂ ತಾಕತ್ತಿಲ್ಲ ಎಂದರು.