newsics.com
ಬೆಂಗಳೂರು: ಹಿರಿಯ ನಟಿ ಪದ್ಮಜಾ ರಾವ್ ಅವರು ಸದ್ಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ನಟಿ ಈ ಕುರಿತಾಗಿ ಮಾತನಾಡಿ. ಇದು ಮೂರು ವರ್ಷದ ಹಳೆಯ ಪ್ರಕರಣ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಈ ಪ್ರಕರಣದ ವಿಚಾರವಾಗಿ ಸೆಷನ್ ಕೋರ್ಟ್‌ಗೆ ಅಪೀಲ್ ಹೋಗಿದ್ದೀನಿ. ನ್ಯಾಯಾಂಗದ ಮೇಲೆ ನನಗೆ ನಂಬಿಕೆ ಇದೆ ಎಂದಿದ್ದಾರೆ.
ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದ್ದು, ನಾನು ಯಾರಿಗೂ ಮೋಸ ಮಾಡಿಲ್ಲ. ಇಷ್ಟರಲ್ಲೇ ಸತ್ಯ ಏನು ಅಂತಾ ಎಲ್ಲರಿಗೂ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.