newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ಜೈಲಿನಲ್ಲಿ ದರ್ಶನ್ ಅವರಿಗೆ ಸಿಗರೇಟ್ ನೀಡಿರುವ ಫೋಟೋ ವೈರಲ್ ಆಗಿದ್ದು, ಈ ಸಂಬಂಧ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿವೆ. ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡ ರಚಿಸಲಾಗಿದೆ.
ಜೈಲಿನ ನಿಯಮಗಳನ್ನು ಉಲ್ಲಂಘಟನೆ ಮಾಡಿದ್ದಕ್ಕಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿದ್ದು, ಎರಡರಲ್ಲಿ ಎ1 ದರ್ಶನ್ ಆಗಿದ್ದಾರೆ. ಈ ಮೂರು ಪ್ರಕರಣದ ತನಿಖೆಗಾಗಿ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರು ಮೂರು ವಿಶೇಷ ತಂಡ ರಚನೆ ಮಾಡಿದ್ದಾರೆ.
ಬೇಗೂರು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ಅವರಿಂದ ಮೊದಲನೇ ಪ್ರಕರಣದ ತನಿಖೆ ನಡೆಯುತ್ತದೆ. ಮೊಬೈಲ್ ಫೋನ್ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಣದ ಬಗ್ಗೆ ಹುಳಿಮಾವು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ತನಿಖೆ ನಡೆಸುತ್ತಾರೆ. ಇನ್ನು ಜೈಲು ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ದಾಖಲಾಗಿರುವ ಮೂರನೇ ಪ್ರಕರಣವನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಎಸಿಪಿ ಮಂಜುನಾಥ್ ನೇತೃತ್ಚದ ತಂಡ ತನಿಖೆ ನಡೆಸುತ್ತದೆ.