newsics.com
ಬೆಂಗಳೂರು: ಮುಡಾ ಸೈಟ್ ಹಂಚಿಕೆ ಹಗರಣ ಸಿಎಂ ಸಿದ್ದರಾಮಯ್ಯಗೆ ಆತಂಕ ತಂದೊಡ್ಡಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿಯನ್ನೂ ಕೊಟ್ಟಿದ್ದಾರೆ. ಇದರ ಮಧ್ಯೆ ಹೈಕೋರ್ಟ್ 10ದಿನಗಳ ಕಾಲ ಮಧ್ಯಂತರ ತಡೆ ನೀಡಿತ್ತು. ತಾತ್ಕಾಲಿಕ ರಿಲೀಫ್ ಗೆ ಇವತ್ತೊಂದೇ ದಿನ ಬಾಕಿಯಿದೆ. ಗುರುವಾರ ಹೈಕೋರ್ಟ್‌ನಲ್ಲಿ ಮತ್ತೆ ವಿಚಾರಣೆ ನಡೆಯಲಿದೆ. ಪ್ರಾಸಿಕ್ಯೂಷನ್, ಖಾಸಗಿ ದೂರುಗಳಿಗೆ ಮಧ್ಯಂತರ ತಡೆ ನೀಡಿ ಆದೇಶಿಸಿದ್ದ ಕೋರ್ಟ್ ವಿಚಾರಣೆ ನಡೆಸಲಿದೆ. ಏನಾಗಲಿದೆ ಎಂಬುದರ ಬಗ್ಗೆಯೇ ಎಲ್ಲರ ಚಿತ್ತ ನೆಟ್ಟಿದೆ.
ಈ ಮಧ್ಯೆ, ರಾಜ್ಯಪಾಲರ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್, ಮತ್ತೊಂದು ಹೋರಾಟಕ್ಕೆ ಸಜ್ಜಾಗಿದೆ. ನಾಳೆ ಹೈಕೋರ್ಟ್ ನಲ್ಲಿ ಹೈವೋಲ್ಟೇಜ್ ವಿಚಾರಣೆ ನಡೆಯಿದೆ. ಇತ್ತ ರಾಜಭವನ ಚಲೋಗೆ ಡಿಸಿಎಂ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಆಗಸ್ಟ್ 31ರಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಶಾಸಕರು, ಸಚಿವರು, ಪರಿಷತ್ ಸದಸ್ಯರು, ಸಂಸದರು ಪ್ರತಿಭಟಿಸಲಿದ್ದಾರೆ. ವಿಧಾನಸೌಧ ಬಳಿಯಿರುವ ಮಹಾತ್ಮ ಗಾಂಧಿ ಪ್ರತಿಮೆಯಿಂದ ರಾಜಭವನ ಚಲೋ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.