newsics.com
ತನ್ನ ಸ್ವಾರ್ಥಕ್ಕಾಗಿ ಪಾಪಿ ತಾಯಿ ಹೆತ್ತ ಕಂದಮ್ಮ ಕಥೆಯನ್ನೇ ಮುಗಿಸಿದ್ದಾಳೆ. ಹೌದು ಪ್ರಿಯಕರನೊಂದಿಗೆ ಕಾಲ ಕಳೆಯಲು ಮಗು ಅಡ್ಡಿಯಾಗುತ್ತೆ ಎಂಬ ಕಾರಣಕ್ಕೆ ಪಾಪಿ ತಾಯಿ ತನ್ನ ಪ್ರಿಯಕರನೊಂದಿಗೆ ಸೇರಿ ಕರುಳ ಕುಡಿಯನ್ನೇ ಕೊಂದು, ಮೃತ ದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪೊದೆಗೆ ಎಸೆದಿದ್ದಾಳೆ. ಈ ಆಘಾತಕಾರಿ ಪ್ರಕರಣದ ಸುದ್ದಿ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
ಈ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ಮಿಥುನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಮಬಾಗ್ ಪ್ರದೇಶದಲ್ಲಿ ಪಾಪಿ ತಾಯಿಯೊಬ್ಬಳು ಪ್ರಿಯಕರನಿಗಾಗಿ ತನ್ನ ಮೂರು ವರ್ಷ ವಯಸ್ಸಿನ ಮಗುವನ್ನೇ ಕೊಂದು ಹಾಕಿದ್ದಾಳೆ