ಕುರ್ಚಿಗೆ ಕಟ್ಟಿ ಹಾಕಿ ಚಿತ್ರಹಿಂಸೆ ಕೊಟ್ಟು ಬೆಂಗಳೂರಲ್ಲಿ ಮಹಿಳೆಯ ಕೊಲೆ

newsics.com ಬೆಂಗಳೂರು: ಬೆಂಗಳೂರಲ್ಲಿ ಮಹಿಳೆಯ ಭೀಕರ ಹತ್ಯೆ ನಡೆದಿದೆ. ಪತ್ನಿಯನ್ನು ಕುರ್ಚಿಗೆ ಕಟ್ಟಿ ಹಾಕಿ ಗಂಡನೇ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. 25 ವರ್ಷದ ನವ್ಯಾ ಕೊಲೆಯಾದ ಮಹಿಳೆ.ಇಂದು ಮಧ್ಯಾಹ್ನ 1.30ರ ಸುಮಾರಿಗೆ ನವ್ಯಾ ಗಂಡ ಕಿರಣ್ ಈ ಕೃತ್ಯ ಎಸಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ನಗರದ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಈ ಭಯಾನಕ ಘಟನೆ ನಡೆದಿದೆ. ಕಿರಣ್ ಪತ್ನಿಯ ಮೇಲೆ ಅನುಮಾನಗೊಂಡು ಗಲಾಟೆ ಮಾಡುತ್ತಿದ್ದ. ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆಯಾಗಿದೆ ಎನ್ನಲಾಗಿದೆ.