newsics.com
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಗಮನ ಸೆಳೆದವರು. ಅವರು ಹಿರಿತೆರೆಯಲ್ಲೂ ತೊಡಗಿಕೊಂಡಿದ್ದಾರೆ. ಈಗ ಅವರು ತಮ್ಮ ಬಾಳ ಸಂಗಾತಿಯನ್ನು ಪರಿಚಯಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಸ್ವತಃ ಅವರೇ ಈ ಫೋಟೋ ಹಂಚಿಕೊಂಡಿದ್ದಾರೆ.
ರಂಜನಿ ಅವರ ಕೈ ಹಿಡಿಯುತ್ತಿರೋ ಹುಡುಗನ ಹೆಸರು ಸಾಗರ್ ಭಾರಧ್ವಜ್. ಅವರು ವೃತ್ತಿಯಲ್ಲಿ ಅಥ್ಲೆಟ್ ಎನ್ನಲಾಗಿದೆ. ರನ್ನರ್, ಸೈಕಲಿಸ್ಟ್, ಬೈಕರ್. ಅವರು ಇನ್ಸ್ಟಾಗ್ರಾಮ್ ಖಾತೆಯನ್ನು ಪ್ರೈವೇಟ್ ಆಗಿ ಇಟ್ಟಿದ್ದಾರೆ.
ರಂಜನಿ ರಾಘವನ್ ಹಂಚಿಕೊಂಡ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಅವರ ಮದುವೆ ಹಾಗೂ ನಿಶ್ಚಿತಾರ್ಥದ ದಿನಾಂಕ ಇನ್ನಷ್ಟೇ ರಿವೀಲ್ ಆಗಬೇಕಿದೆ.