newsics.com
ಗಂಗಾವತಿ(ಕೊಪ್ಪಳ): ನಗರದ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಳವಡಿಸಲಾದ ವಿಶೇಷ ವಿದ್ಯುತ್ ಕಂಬಗಳ ತೆರವಿಗೆ ತಹಸೀಲ್ದಾರ್ ನಾಗರಾಜ್ ಆದೇಶಿಸಿದ್ದಾರೆ.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಸಂಸ್ಥೆ ವಿರುದ್ಧ ಪ್ರಕರಣ ದಾಖಲಿಸುವಂತೆಯೂ ಸೂಚಿಸಿದ್ದಾರೆ.
ಗಂಗಾವತಿಯ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗಿನ ರಸ್ತೆ ನಗರಸಭೆ ವ್ಯಾಪ್ತಿಗೆ ಬರುತ್ತಿದೆ. ಕೆಐಆರ್‌ಡಿಎಲ್ ಸಂಸ್ಥೆ ಸ್ಥಾಪಿಸಿದ ವಿದ್ಯುತ್ ಕಂಬಗಳು ಧಾರ್ಮಿಕ ಸೌಹಾರ್ದ ಹಾಗೂ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ನಿರ್ಮಾಣವಾಗಿದೆ ಎಂದು ಅರೊಪಿಸಿದ್ದ ಎಸ್‌ಡಿಪಿಐ ಸಂಘಟನೆ, ವಿದ್ಯುತ್ ಕಂಬಗಳನ್ನು ತೆರವುಗೊಳಿಸಲು ಇತ್ತೀಚೆಗೆ ಮನವಿ ಸಲ್ಲಿಸಿತ್ತು.
ಆ.28 ರಂದು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದಂತೆ ತಹಸೀಲ್ದಾರ್ ಅವರು ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷರಿಗೆ ಸೂಚನೆ ನೀಡಿದ್ದಾರೆ.
