newsics.com
ಬೆಂಗಳೂರು: ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಎಂಟ್ರಿ ಆಗಿದ್ದಾರೆ. ಮುಂಜಾನೆ 10 ಗಂಟೆ ಸುಮಾರಿಗೆ ಅವರು ಬಳ್ಳಾರಿ ಜೈಲು ತಲುಪಿದ್ದಾರೆ.

ಈ ವಿಡಿಯೋ ಲಭ್ಯವಾಗಿದೆ. ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಅವರನ್ನು ಕರೆದುಕೊಂಡು ಹೋಗಲಾಯಿತು. ಸುಮಾರು ಐದೂವರೆ ಗಂಟೆಗಳ ಪ್ರಯಾಣದ ಬಳಿಕ ಅವರನ್ನು ಬಳ್ಳಾರಿಗೆ ತಲುಪಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಮಾಡಲಾಗುತ್ತಿದೆ. ಮುಂಜಾನೆ 4.30ರ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಅವರನ್ನು ಪೊಲೀಸರು ಕರೆದೊಯ್ದಿದ್ದಾರೆ.