newsics.com
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ರಾಷ್ಟ್ರಮಟ್ಟದ 8 ವೀಡಿಯಾ, 5 ಎಮ್ಕ್ಯೂಬ್ ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಗಳಿಗೆ ಭಾಜನವಾಗಿದೆ.
ViDEA ಪ್ರಶಸ್ತಿ ಮತ್ತು mCUBE ಪ್ರಶಸ್ತಿಗಳನ್ನು ಗುರುಗಾಂವ್‌ನಲ್ಲಿ, ಪ್ರದಾನ ಮಾಡಲಾಯಿತು. ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಆನ್‌ಲೈನ್‌ನಲ್ಲಿ ಪ್ರದಾನ ಮಾಡಲಾಯಿತು.
ಸ್ಕಾಚ್ ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 21ರಂದು ನವದೆಹಲಿಯಲ್ಲಿ ನಡೆಯಲಿದೆ ಎಂದು
ಕೆಎಸ್ಆರ್‌ಟಿಸಿ ಮಂಡಳಿ ಕಾರ್ಯದರ್ಶಿ, ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ತಿಳಿಸಿದ್ದಾರೆ.
ಪ್ರಶಸ್ತಿಗಳ ವಿವರ:
1. ಪಲ್ಲಕ್ಕಿ ಬ್ರಾಂಡಿಂಗ್‌ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
2. ಅಶ್ವಮೇಧ ಬ್ರಾಂಡಿಂಗ್‌ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್(ಆಫ್ಲೈನ್)ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
3. ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.
4. ಅಶ್ವಮೇಧ ಬ್ರಾಂಡಿಂಗ್‌ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.
5. ಪಲ್ಲಕ್ಕಿ ಬ್ರಾಂಡಿಂಗ್‌ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್‌ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
6. ಅಂಬಾರಿ ಉತ್ಸವದ ಬ್ರಾಂಡಿಂಗ್‌ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್‌ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
7. ಅಶ್ವಮೇಧ ಬ್ರಾಂಡಿಂಗ್‌ಗಾಗಿ ಮೊಬೈಲ್ ಮಾರ್ಕೆಟಿಂಗ್ ಕ್ಯಾಂಪೇನ್ – ಒಟ್ಟಾರೆ ಅತ್ಯುತ್ತಮ ವೀಡಿಯೊ ಕಂಟೆಂಟ್.
8. ಶ್ರೇಷ್ಠ ವೀಡಿಯೊ ಕಂಟೆಂಟ್ ಬ್ರಾಂಡ್ಸ್ ಎಂಟರ್ಪ್ರೈಸ್ – ಕೆಎಸ್ಆರ್‌ಟಿಸಿ.
ಎಮ್ಕ್ಯೂಬ್ ಪ್ರಶಸ್ತಿಗಳು:
1. ಬ್ರಾಂಡಿಂಗ್‌ಗಾಗಿ ಶ್ರೇಷ್ಠ ಪಿಆರ್ ಕ್ಯಾಂಪೇನ್.
2. ಬ್ರಾಂಡಿಂಗ್‌ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್).
3. ಪ್ರವಾಸ ಮತ್ತು ಪ್ರಯಾಣದ ಶ್ರೇಷ್ಠ ಎಟಿಎಲ್ ಕ್ಯಾಂಪೇನ್.
4. ಶಕ್ತಿ ಯೋಜನೆಗಾಗಿ ಶ್ರೇಷ್ಠ ಬ್ರಾಂಡ್ ಕಂಟೆಂಟ್.
5. ಬ್ರಾಂಡಿಂಗ್‌ಗಾಗಿ ಶ್ರೇಷ್ಠ ಆನ್ಲೈನ್ ಪಿಆರ್ ಕ್ಯಾಂಪೇನ್.
ನಿಗಮವು ಸಾರಿಗೆ ಸಂಜೀವಿನಿ- ನೌಕರರ ಹೃದಯ ರೋಗ ತಪಾಸಣೆಗಾಗಿ ಮತ್ತು ರಸ್ತೆ ಸುರಕ್ಷತೆ ಉಪಕ್ರಮಗಳಿಗಾಗಿ 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಮತ್ತು 1 ಸ್ಕಾಚ್ ಪ್ರಶಸ್ತಿ ಪಡೆದಿದೆ.
ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 4 ಪದಕ: ಅವನಿಗೆ ಚಿನ್ನ, ಮನೀಶ್‌ಗೆ ಬೆಳ್ಳಿ, ಮೋನಾ, ಪ್ರೀತಿಗೆ ಕಂಚು
ಅಂಕೋಲಾ ಬಳಿ ಟ್ಯಾಂಕರ್ ಉರುಳಿ ಆ್ಯಸಿಡ್ ಸೋರಿಕೆ, ದಟ್ಟ ಹೊಗೆ, ಹೆಚ್ಚಿದ ಆತಂಕ