newsics.com
ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಗೆ ತಲೆನೋವು ಶುರುವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ದರ್ಶನ್ ಅವರು ತಮ್ಮ ಪ್ರಭಾವ ಬಳಸಿ ವಿಐಪಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದರು. ಅವರ ವಿಡಿಯೋ ಮತ್ತು ಫೋಟೋ ಲೀಕ್ ಆಯಿತು. ಆ ಬಳಿಕ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಆರಂಭಿಸಲಾಯಿತು. ಇದರ ಬೆನ್ನಲ್ಲೇ ಕಾರಾಗೃಹ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ನೋಟಿಸ್ ನೀಡಲಾಗಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಈ ನೋಟಿಸ್ ನೀಡಲಾಗಿದೆ. ಜೈಲಿನಲ್ಲಿ ನಡೆದ ಅಕ್ರಮದ ಬಗ್ಗೆ ವಿವರಣೆ ನೀಡುವಂತೆ ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ನೋಟಿಸ್ ನೀಡಿರುವುದು ತಿಳಿದುಬಂದಿದೆ. ಕೃಷ್ಣಮೂರ್ತಿ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ನೋಟಿಸ್ನಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರ ನೀಡುವಂತೆ ತಿಳಿಸಲಾಗಿದೆ