newsics.com
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಡಿಸಿಎಂ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ 15 ದಿನಗಳ ಗಡುವು ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳ ಬಗ್ಗೆ ಸಾಕಷ್ಟು ದೂರು ಬರುತ್ತಿವೆ. ಹೀಗಾಗಿ ತುರ್ತಾಗಿ ಗಮನಹರಿಸಿ ಗುಂಡಿ ಮುಚ್ಚುವಂತೆ ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.
ಮಾಧ್ಯಮ ಪ್ರಕಟಣೆ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದು, ಸಾರ್ವಜನಿಕರು ರಸ್ತೆ ಗುಂಡಿ ಫೋಟೋ ತೆಗೆದು ಅಪ್ಲೋಡ್ ವ್ಯವಸ್ಥೆ ಇದ್ದು, ಆ್ಯಪ್ ಮೂಲಕ ಈಗಾಗಲೇ ಫೋಟೋ ಜೊತೆ ಜನರು ದೂರು ನೀಡಿದ್ದಾರೆ. 15 ದಿನಗಳ ನಂತರ ನಾನೇ ಸ್ವತಃ ಬೆಂಗಳೂರು ಪ್ರದಕ್ಷಿಣೆ ಹಾಕುತ್ತೇನೆ. ಅಷ್ಟರಲ್ಲಿ ರಸ್ತೆ ಗುಂಡಿ ಮುಚ್ಚಬೇಕೆಂದು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.