newsics.com
ವೆಸ್ಟ್ ಇಂಡೀಸ್ ಕ್ರಿಕೆಟಿಗ ಡ್ವೇನ್ ಬ್ರಾವೊ ಕೆರಿಬಿಯನ್ ಪ್ರೀಮಿಯರ್ ಲೀಗ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿಯ ಸಿಪಿಎಲ್ ಮುಕ್ತಾಯದೊಂದಿಗೆ ವೆಸ್ಟ್ ಇಂಡೀಸ್ ಟಿ20 ಲೀಗ್ಗೆ ವಿದಾಯ ಹೇಳುತ್ತಿರುವುದಾಗಿ ಬ್ರಾವೊ ತಿಳಿಸಿದ್ದಾರೆ. ಈ ಮೂಲಕ ಟ್ರಿನ್‌ಬಾಗೊ ನೈಟ್ ರೈಡರ್ಸ್ ಪರ ಕೊನೆಯ ಪಂದ್ಯವಾಡುವ ಮೂಲಕ ಸಿಪಿಎಲ್ಗೆ ಗುಡ್ ಬೈ ಹೇಳುವ ಇರಾದೆಯಲ್ಲಿದ್ದಾರೆ.
ಇದು ಉತ್ತಮ ಪ್ರಯಾಣ. ಹಾಗೆಯೇ ಇದು ನನ್ನ ಕೆರಿಬಿಯನ್ ಪ್ರೀಮಿಯರ್ ಲೀಗ್ನ ಕೊನೆಯ ಸೀಸನ್. ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡದೊಂದಿಗೆ ನಾನು ಸಿಪಿಎಲ್ ಆರಂಭಿಸಿದ್ದೆ, ಇದೀಗ ಇದೇ ತಂಡದೊಂದಿಗೆ ವಿದಾಯ ಹೇಳುತ್ತಿರುವುದಾಗಿ ಡ್ವೇನ್ ಬ್ರಾವೊ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.
2021 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದ ಡ್ವೇನ್ ಬ್ರಾವೊ ಟಿ20 ಫ್ರಾಂಚೈಸಿ ಲೀಗ್ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ತವರಿಗೆ ಟಿ20 ಲೀಗ್ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಹೀಗಾಗಿ ಅವರು ಮುಂಬರುವ ದಿನಗಳಲ್ಲಿ ಇತರೆ ಲೀಗ್ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ತುಂಬಾ ಕಡಿಮೆ.