newsics.com
ಮೈಸೂರು: ಮುಡಾ ಹಗರಣದಲ್ಲಿ ಮೊದಲ ತಲೆದಂಡವಾಗಿದ್ದು, ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಜಿಟಿ ದಿನೇಶ್ ಕುಮಾರ್ ರನ್ನು ಅಮಾನತು ಮಾಡಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಹಿಂದಿನ ಆಯುಕ್ತ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕವಾಗಿದ್ದ ಜಿ.ಟಿ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ನಿವೇಶನ ಹಂಚಿಕೆಯ ಬಹುಕೋಟಿ ಹಗರಣ ಪ್ರಕರಣದಲ್ಲಿ ಮೊದಲ ವಿಕೆಟ್ ಪತನವಾಗಿದೆ.
ಮೈಸೂರಿನ ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಕಳೆದ ಮೂರು ದಿನಗಳ ಹಿಂದೆಯಷ್ಟೇ ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಮಾಜಿ ಆಯುಕ್ತರುಗಳಾದ ನಟೇಶ್ ಹಾಗೂ ಜಿ.ಟಿ.ದಿನೇಶ್ ಕುಮಾರ್ ವಿರುದ್ಧ ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೆ ಇದೀಗ
ರಾಜ್ಯಪಾಲರ ಆದೇಶಾನುಸಾರವಾಗಿ ದಿನೇಶ್ ಕುಮಾರ್ ಅವರನ್ನ ಸಸ್ಪೆಂಡ್ ಮಾಡಿ ಸರ್ಕಾರದ ಕಾರ್ಯದರ್ಶಿ ಉಮಾದೇವಿ ಅವರು ಇಂದು ಆದೇಶ ಹೊರಡಿಸಿದ್ದಾರೆ.
ಲಕ್ಷಿಪುರಂ ಠಾಣೆಯಲ್ಲಿ ದೂರು.
ಮುಡಾ ಮಾಜಿ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಹಾಗೂ ಜಿ.ಟಿ.ದಿನೇಶ್ ಕುಮಾರ್ ಅವರು ಸರಕಾರಕ್ಕೆ ೫ ಸಾವಿರ ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ. ಇವರಿಬ್ಬರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ವಕೀಲ ಅರುಣ್‌ಕುಮಾರ್ ಎನ್ನುವರು ಮೈಸೂರಿನ ಲಕ್ಷಿ÷್ಮಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.