Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ಯಾರಿಸ್ ಪ್ಯಾರಾಲಿಂಪಿಕ್ಸ್: ಬೆಳ್ಳಿ ಗೆದ್ದ ಕನ್ನಡಿಗ, ಒಂದೇ ದಿನ ಭಾರತಕ್ಕೆ ಏಳು ಪದಕ
ದೇಶಪ್ರಮುಖವಿದೇಶ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್: ಬೆಳ್ಳಿ ಗೆದ್ದ ಕನ್ನಡಿಗ, ಒಂದೇ ದಿನ ಭಾರತಕ್ಕೆ ಏಳು ಪದಕ

Share
2 Min Read
SHARE

newsics.com

ಪ್ಯಾರಿಸ್: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಅಥ್ಲಿಟ್‌ಗಳ ಪದಕ ಬೇಟೆ ಮುಂದುವರಿದಿದೆ. ಸೋಮವಾರ ಒಂದೇ ದಿನ ಎರಡು ಚಿನ್ನ, 3 ಬೆಳ್ಳಿ, ಎರಡು ಕಂಚು ಸೇರಿ ಒಟ್ಟೂ ಏಳು ಪದಕಗಳನ್ನು ಭಾರತ ಬಾಚಿಕೊಂಡಿದೆ.

ಕನ್ನಡಿಗ ಸುಹಾಸ್ ಯತಿರಾಜ್ ಕೂಡ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಕ್ರೀಡಾಭಿಮಾನಿಗಳ ಸಂತಸ ಹೆಚ್ಚಿಸಿದ್ದಾರೆ. ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್‌ 4 ವಿಭಾಗದಲ್ಲಿ ಸುಹಾಸ್ ಯತಿರಾಜ್ ಬೆಳ್ಳಿ ಪದಕ ಗೆದ್ದಿದ್ದಾರೆ.

ಫೈನಲ್‌ ಪಂದ್ಯದಲ್ಲಿ ಫ್ರಾನ್ಸ್‌ನ ಲೂಕಾಸ್ ಮಜೂರ್ ವಿರುದ್ಧ ನೇರ ಗೇಮ್‌ಗಳಲ್ಲಿ ಸೋತ ಬಳಿಕ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಫೈನಲ್ ತಲುಪಿದ್ದ ಸುಹಾಸ್ ಯತಿರಾಜ್, ಲಾ ಚಾಪೆಲ್ಲೆ ಅರೆನಾದಲ್ಲಿ ನಡೆದ ಚಿನ್ನದ ಪದಕದ ಪಂದ್ಯದಲ್ಲಿ ಫ್ರಾನ್ಸ್‌ನ ಲುಕಾಸ್ ಮಜೂರ್ ವಿರುದ್ಧ 9-21, 9-21 ಸೆಟ್‌ಗಳಿಂದ ಸೋತರು. 34 ನಿಮಿಷಗಳಲ್ಲಿ ಫೈನಲ್ ಪಂದ್ಯ ಮುಕ್ತಾಯವಾಯಿತು.

ಎಸ್‌ಎಲ್‌4 ಅನ್ನು ದೇಹದ ಒಂದು ಬದಿಯಲ್ಲಿ, ಎರಡೂ ಕಾಲುಗಳಲ್ಲಿ ಸೀಮಿತ ಚಲನೆಯನ್ನು ಅನುಭವಿಸುವ ಆಟಗಾರರಿಗಾಗಿ ವಿನ್ಯಾಸಗೊಳಿಸಲಾಗಿದೆ. ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಬಳಿಕ ಅಗ್ರ ಶ್ರೇಯಾಂಕಿತ ಆಗಿರುವ ಸುಹಾಸ್ ಈ ಬಾರಿ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದಿಂದ ವಂಚಿತರಾದರು.

ವಿಶ್ವ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಚಿನ್ನದ ಪದಕಗಳನ್ನು ಗೆದ್ದಿರುವ ಸುಹಾಸ್, ಪ್ಯಾರಾಲಿಂಪಿಕ್ಸ್ ಫೈನಲ್‌ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶ ನೀಡುವಲ್ಲಿ ವಿಫಲವಾದರು. ಫ್ರಾನ್ಸ್ ಆಟಗಾರ ಪಂದ್ಯದಲ್ಲಿ ಸಂಪೂರ್ಣವಾಗಿ ಮೇಲುಗೈ ಸಾಧಿಸಿದರು. ಸುಹಾಸ್ ಮೊದಲ ಗೇಮ್‌ನಲ್ಲಿ 12 ಪಾಯಿಂಟ್‌ಗಳ ಬೃಹತ್ ಮುನ್ನಡೆಯನ್ನು ಬಿಟ್ಟುಕೊಟ್ಟರು. ಎರಡನೇ ಗೇಮ್‌ನಲ್ಲಿ ಸುಹಾಸ್ ಹೋರಾಟ ಕೊಟ್ಟರು ಕೂಡ ಫ್ರೆಂಚ್‌ ಆಟಗಾರ ಸಂಪೂರ್ಣವಾಗಿ ಮೇಲುಗೈ ಸಾಧಿಸಿದರು.

ಸುಹಾಸ್ ಯತಿರಾಜ್‌ ಕರ್ನಾಟಕದ ಹಾಸನ ಹುಡುಗ. ಅವರು ಕ್ರೀಡೆ ಮತ್ತು ಶಿಕ್ಷಣದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಐಎಎಸ್‌ ಅಧಿಕಾರಿಯಾಗಿರುವ ಸುಹಾಸ್ ತಮ್ಮ ಜನಪರ ಆಡಳಿತದಿಂದ ಕೂಡ ಸಾಕಷ್ಟು ಹೆಸರು ಮಾಡಿದ್ದಾರೆ. ಸುಹಾಸ್ ಸುರತ್ಕಲ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದರು. 2006 ರಲ್ಲಿ ಸಿವಿಲ್ ಸರ್ವೀಸಸ್ ಪರೀಕ್ಷೆಯಲ್ಲಿ ಪಾಸಾದರು.

ಗೌತಮ್ ಬುದ್ಧ ನಗರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪ್ರಯಾಗ್ರಾಜ್ ಸೇರಿದಂತೆ ವಿವಿಧ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸಿದ್ದಾರೆ.

ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮತ್ತು ಸೇವೆ ಸಲ್ಲಿಸುತ್ತಿರುವ ಏಕೈಕ ಐಎಎಸ್ ಅಧಿಕಾರಿಯಾಗಿದ್ದಾರೆ. ಅವರ ಸಾಧನೆಗೆ ಅರ್ಜುನ ಪ್ರಶಸ್ತಿ ಮತ್ತು ಉತ್ತರ ಪ್ರದೇಶದ ಅತ್ಯುನ್ನತ ನಾಗರಿಕ ಗೌರವವಾದ ಯಶ್ ಭಾರತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ವೈದ್ಯೆ ಹತ್ಯಾಚಾರ: ಕೋಲ್ಕತಾದ ಆರ್‌‌.ಜಿ.‌ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ‌ ಸಂದೀಪ್ ಘೋಷ್ ಬಂಧನ, ಸಿಎಂ ಮಮತಾಗೆ ಹೆಚ್ಚಿದ ಸಂಕಷ್ಟ

ಡೊಳ್ಳು ಹೊಟ್ಟೆ ಸಮಸ್ಯೆಯೇ? ಇಲ್ಲಿದೆ ಸುಲಭ ಪರಿಹಾರ

TAGGED:Paris Paralympics: Kannadiga wins silverseven medals for India in one day
Share This Article
Facebook Twitter Copy Link Print
Previous Article ವೈದ್ಯೆ ಹತ್ಯಾಚಾರ: ಕೋಲ್ಕತಾದ ಆರ್‌‌.ಜಿ.‌ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ‌ ಸಂದೀಪ್ ಘೋಷ್ ಬಂಧನ, ಸಿಎಂ ಮಮತಾಗೆ ಹೆಚ್ಚಿದ ಸಂಕಷ್ಟ
Next Article ಶುಭೋದಯ‌… ಇಂದಿನ ಪಂಚಾಂಗ, 03-09-2024 ಮಂಗಳವಾರ, ಗಗನಚುಂಬಿ ದಿನ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?