newsics.com
ಬೆಂಗಳೂರು: ಮಾಲಿವುಡ್ ಇಂಡಸ್ಟ್ರಿಯಲ್ಲಿ ಹೀರೋಯಿನ್ಗಳು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಕುರಿತಾದ ಕೆ.ಹೇಮಾ ಸಮಿತಿ ವರದಿ ಬಹಿರಂಗವಾಗಿದೆ. ಸದ್ಯ ಇದೇ ರೀತಿ ಕಮಿಟಿ ನಮ್ಮಲ್ಲಿ ರಚಿಸಬೇಕೆಂದು ಸ್ಯಾಂಡಲ್ವುಡ್ನ ಫೈರ್ ಸಂಸ್ಥೆ ರಾಜ್ಯ ಸರ್ಕಾರವನ್ನ ಕೋರಿದೆ.
ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಸಂಸ್ಥೆ FIRE. ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (FIRE) ಸಂಸ್ಥೆಯಲ್ಲಿ ನಟ ಚೇತನ್ ಅಹಿಂಸಾ, ನಿರ್ದೇಶಕಿ ಕವಿತಾ ಲಂಕೇಶ್ ಇದ್ದಾರೆ. ಇವರೆ ಇದರ ನೇತೃತ್ವ ವಹಿಸಿದ್ದು, ನಿವೃತ್ತ ನ್ಯಾಯಾಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಆಗ್ರಹ ಮಾಡಿದ್ದಾರೆ.
ಕನ್ನಡ ಚಲನಚಿತ್ರೋದ್ಯಮದಲ್ಲೂ ಲೈಂಗಿಕ ಕಿರುಕುಳ ಸಮಸ್ಯೆಯನ್ನು ಮಹಿಳೆಯರು ಎದುರಿಸುತ್ತಿದ್ದಾರೆ. ಇದರ ಕುರಿತು ಅಧ್ಯಯನ ಮಾಡಿ ವರದಿ ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿ ಎಂದು ಫೈರ್ ಸಂಸ್ಥೆ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ಫೈರ್ ಸಂಸ್ಥೆ ಅಧ್ಯಕ್ಷೆ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ನಟಿ ರಮ್ಯಾ, ಪೂಜಾ ಗಾಂಧಿ, ಚೈತ್ರಾ ಜೆ. ಆಚಾರ್, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಕಿಶೋರ್, ನಿಶ್ವಿಕಾ ನಾಯ್ಡು, ಅಮೃತಾ ಅಯ್ಯಂಗಾರ್, ಧನ್ಯಾ ರಾಮ್‌ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧ ಶ್ರೀನಾಥ್, ವಿನಯ್ ರಾಜ್‌ಕುಮಾರ್, ಸುದೀಪ್ ಸೇರಿದಂತೆ 153 ಮಂದಿ ಅರ್ಜಿಗೆ ಸಹಿ ಹಾಕಿದ್ದಾರೆ.