ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಯುವಕರ ಸಾವು

newsics.com ವಿಜಯಪುರ: ಯುವಕರಿಬ್ಬರ ಬೈಕ್ ವ್ಹೀಲಿಂಗ್ ಹುಚ್ಚಿಗೆ ಸವಾರರೂ ಸೇರಿ ನಾಲ್ವರು ಬಲಿಯಾಗಿರುವ ಭಯಾನಕ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ‌ ನಡೆದಿದೆ. ಘಟನೆಯಲ್ಲಿ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಗುರುವಾರ ಮಧ್ಯರಾತ್ರಿ ಕುಂಟೋಜಿ ಗ್ರಾಮದ ಹತ್ತಿರ ಮುದ್ದೇಬಿಹಾಳ-ತಾಳಿಕೋಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರ್ವ ಬಾಗಲಕೋಟೆ ಜಿಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿನ ಜಾವ ಮೃತನಾಗಿದ್ದಾನೆ. ಮೃತರೆಲ್ಲರೂ ಮಲಗಲದಿನ್ನಿ ಗ್ರಾಮದ ಯುವಕರು ಎಂದು ಹೇಳಲಾಗಿದೆ. ಕುಂಟೋಜಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ನಡೆಯುತ್ತಿದೆ. … Continue reading ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಯುವಕರ ಸಾವು