newsics.com
ಬೆಂಗಳೂರು : ಮಧುಗಿರಿ ತಾಲ್ಲೂಕು ಕಾಟಗಾನಹಟ್ಟಿ ಬಳಿ ಎರಡು ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿರೋ ಭಯಾನಕ ಘಟನೆ ನಡೆದಿದೆ.
ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಓರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವಾಗ ಪ್ರಾಣ ಬಿಟ್ಟಿದ್ದಾರೆ. ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರಾಗಿದ್ದಾರೆ.ಮೃತದೇಹಗಳನ್ನು ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಸಿಯಾಜ್ ಮಾರುತಿ ಕಾರು ತುಮಕೂರು ಕಡೆಯಿಂದ ಬರುತ್ತಿತ್ತು. ಟಾಟಾ ಟಿಯಾ ಮಧುಗಿರಿ ಕಡೆಯಿಂದ ತುಮಕೂರು ಕಡೆ ಹೋಗುತ್ತಿತ್ತು. ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಹಾಗೂ ಕಾಟಗಾನಹಟ್ಟಿ ಬಳಿ ಈ ದುರ್ಘಟನೆ ನಡೆದಿದೆ.