newsics.com
ಬೃಂದಾವನ’ ಸೀರಿಯಲ್ ನಟ ವರುಣ್ ಆರಾಧ್ಯ ವಿರುದ್ಧ FIR ದಾಖಲಾಗಿದೆ. ಕಿರುತೆರೆಯ ಸೀರಿಯಲ್ ಗಳಲ್ಲಿ ನಟಿಸಿರುವ ವರುಣ್ ಆರಾಧ್ಯ ವಿರುದ್ಧ ಗಂಭೀರ ಆರೋಪ ಎದುರಾಗಿದೆ. ಪ್ರೀತಿಸಿದ ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಈತ ಬ್ಲ್ಯಾಕ್ಮೇಲ್ ಮಾಡಿದ್ದಾನೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪಶ್ಚಿಮ ವಿಭಾಗದ CEN ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಐಟಿ ಕಾಯ್ದೆ ಅನ್ವಯ ವರುಣ್ ಆರಾಧ್ಯ ವಿರುದ್ಧ ದೂರು ದಾಖಲು ಮಾಡಿಕೊಳ್ಳಲಾಗಿದೆ. ಈ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ವರುಣ್ಯ ಆರಾಧ್ಯ ನಂತರ ಬ್ರೇಕಪ್ ಮಾಡಿಕೊಂಡಿದ್ದ. ಈಗ ಬೇರೊಬ್ಬ ಯುವತಿಯನ್ನು ಪ್ರೀತಿಸುತ್ತಿದ್ದಾನೆ ಎನ್ನಲಾಗಿದೆ. ಬ್ರೇಕಪ್ ಆದರೂ ಫೋಟೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿದ ಆರೋಪದಲ್ಲಿ ಕೇಸ್ ದಾಖಲಾಗಿದೆ.
2019ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವತಿಯ ಜತೆ ನಟ ವರುಣ್ ಆರಾಧ್ಯ ಪ್ರೀತಿಯಲ್ಲಿ ಬಿದ್ದಿದ್ದ. ಜಾಲತಾಣದ ಮಾರ್ಕೆಟಿಂಗ್ ಮಾಡ್ತಿದ್ದ ಯುವತಿಯನ್ನು ಪ್ರೀತಿಸಿ ವಂಚನೆ ಮಾಡಿದ್ದಾನೆ ಎಂಬ ಆರೋಪ ಎದುರಾಗಿದೆ. ಸುಮಾರು ನಾಲ್ಕು ವರ್ಷಗಳ ಕಾಲ ಪರಸ್ಪರ ಪ್ರೀತಿಯಲ್ಲಿದ್ದ ಜೋಡಿಯ ನಡುವೆ ನಂತರ ಬಿರುಕು ಮೂಡಿತು. ಖಾಸಗಿ ಫೋಟೋವನ್ನು ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಪ್ರೀತಿಸಿದ ಯುವತಿಗೆ ತನ್ನ ಜೊತೆಯಲ್ಲಿರುವ ಖಾಸಗಿ ಫೋಟೋ ಕಳುಹಿಸಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ‘ನನ್ನ ಬಳಿ ನಿನ್ನ ಜೊತೆಗಿರುವ ಖಾಸಗಿ ಫೋಟೋ, ವಿಡಿಯೋಗಳಿವೆ. ನೀನು ನನ್ನ ವಿಚಾರ ಬಾಯಿಬಿಟ್ಟರೆ ಖಾಸಗಿ ಪೋಟೋ ಹರಿಬಿಡ್ತೇನೆ. ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ’ ಎಂದು ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಈ ದೂರಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.