newsics.com
ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ನಿನ್ನೆ ರಾತ್ರಿ ಅಮಂಗಳದ ಕೃತ್ಯ ನಡೆದಿದೆ. ಅದ್ಧೂರಿ ಗಣೇಶೋತ್ಸವದಲ್ಲಿ ಅಹಿತಕರ ಘಟನೆ ನಡೆದಿದೆ. ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿ, ದಾಂಧಲೆ ನಡೆಸಿದ್ದಾರೆ. ಪೊಲೀಸರು ಲಾಠಿ ಪ್ರಯೋಗಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಹಿಂದೂ ಸಂಘಟನೆಗಳು ನಾಗಮಂಗಲ ಬಂದ್ಗೆ ಕರೆ ನೀಡಿವೆ.
ನಾಗಮಂಗಲ ಪಟ್ಟಣದಲ್ಲಿ ನಿನ್ನೆ ರಾತ್ರಿ ಗಣೇಶ ಮೆರವಣಿಗೆ ವೇಳೆ ಅಮಂಗಲ ಉಂಟು ಮಾಡುವ ಕೃತ್ಯ ನಡೆದಿದೆ. ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿಯನ್ನು ಪ್ರತಿವರ್ಷದಂತೆ ಈ ಬಾರಿಯೂ ಅದ್ಧೂರಿಯಾಗಿ ಗಣೇಶ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ಅದ್ಧೂರಿಯಾಗಿ ಮೆರವಣಿಗೆ ಸಾಗಿತ್ತು. ದರ್ಗಾ ಎದುರು ಮೆರವಣಿಗೆ ಸಾಗುತ್ತಿದ್ದಂತೆ ಕೆಲ ಕಿಡಿಗೇಡಿಗಳು ಇದ್ದಕ್ಕಿದ್ದಂತೆ ಕಲ್ಲು ತೂರಿದ್ದೇ ಗಲಾಟೆಗೆ ಕಾರಣ ಆಗಿದೆ.
ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಮುಂದೆ ಮೆರವಣಿಗೆ ಮಾಡದಂತೆ ಕ್ಯಾತೆ ತೆಗೆದ ಕಿಡಿಗೇಡಿಗಳ ಗುಂಪು ದರ್ಗಾ ಮುಂದೆ ತಮಟೆ, ಡೊಳ್ಳು ಬಾರಿಸದಂತೆ ದಾಂಧಲೆ ನಡೆಸಿದೆ. ಮೆರವಣಿಗೆ ಮಾಡ್ತಿದ್ದ ಹಿಂದೂ ಯುವಕರ ಹಾಗೂ ಪೊಲೀಸರ ಮೇಲೆಯೂ ಕಲ್ಲು ತೂರಾಟ ನಡೆಸಿದೆ. ಇದೇ ವೇಳೆ ಮಾರಕಾಸ್ತ್ರಗಳನ್ನು ಝಳಪಿಸಿದೆ. ಪೆಟ್ರೋಲ್ ಬಾಂಬ್ ಕೂಡ ಎಸೆದಿದ್ದಾರೆ ಎನ್ನಲಾಗಿದೆ. ಮಂಡ್ಯ ವೃತ್ತದಲ್ಲಿ ನಾಲ್ಕೈದು ಬೈಕ್ಗಳಿಗೆ ಬೆಂಕಿ ಇಟ್ಟು ರಸ್ತೆ ಬದಿಯ 2-3 ಅಂಗಡಿಗಳನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ, ಅಂಗಡಿ ವಾಹನಗಳಿಗೆ ಬೆಂಕಿ, ದೇಗುಲಕ್ಕೆ ಹಾನಿ, ನಾಗಮಂಗಲ ಉದ್ವಿಗ್ನ