newsics.com
ಚಿತ್ತೂರು: APSRTC ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಮಂದಿ ಮೃತಪಟ್ಟ ಘಟನೆ ಆಂಧ್ರದ ಚಿತ್ತೂರು ಜಿಲ್ಲೆಯ ಪಲಮನೇರು ಮಂಡಲದ ಮೊಗಿಲಿ ಘಾಟ್ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಅಪಘಾತದಲ್ಲಿ 33 ಮಂದಿ ಗಾಯಗೊಂಡಿದ್ದು, ಪಲಮನೇರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ, ಟ್ರಕ್ ಡಿವೈಡರ್ ಅನ್ನು ದಾಟಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಹೆದ್ದಾರಿಯಲ್ಲಿ ಕಬ್ಬಿಣದ ಕಂಬಿಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಲಾರಿಯಿಂದ ಈ ಅಪಘಾತ ಸಂಭವಿಸಿದೆ.
https://www.newsics.com/2024/09/13/did-uppena-beauty-have-a-crush-on-rakshith-shetty/