newsics.com
ಬೆಂಗಳೂರು: ಮಂಕಿಪಾಕ್ಸ್ ಮತ್ತೆ ಬಾಲ ಬಿಚ್ಚಿದೆ. ನೂರಾರು ದೇಶಗಳಲ್ಲಿ ಸಾವಿರಾರು ಮಂದಿಯನ್ನು ಬಲಿಪಡೆದಿರುವ ಹೆಮ್ಮಾರಿ ಮಂಕಿಪಾಕ್ಸ್ ಈಗ ಭಾರತಕ್ಕೆ ಕಾಲಿಟ್ಟಿದೆ. ಕಳೆದ ನಾಲ್ಕು ದಿನಗಳ ಹಿಂದೆ ಕೇಸ್ ವರದಿಯಾಗುತ್ತಿದ್ದಂತೆಯೇ ರಾಜ್ಯ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಲು ಮುಂದಾಗಿದೆ. ಆರಂಭದಲ್ಲಿಯೇ ವೈರಸ್ ನಿಯಂತ್ರಣಕ್ಕೆ ಕಠಿಣ ಕ್ರಮಕ್ಕೆ ಆರೋಗ್ಯ ಇಲಾಖೆ ಮುಂದಾಗಿದ್ದು, ರಾಜಧಾನಿಯಲ್ಲಿ ಮಂಕಿಪಾಕ್ಸ್ಗೆ ಟೆಸ್ಟಿಂಗ್, ಟ್ರ್ಯಾಕಿಂಗ್ ಮತ್ತು ಸ್ಕ್ರೀನಿಂಗ್ ಶುರು ಮಾಡಲಾಗಿದೆ.
ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಪಾಸಿಟಿವ್ ಕಂಡುಬಂದ ದೇಶದಿಂದ ಬರುವ ಪ್ರಯಾಣಿಕರನ್ನು ಟೆಸ್ಟಿಂಗ್ಗೆ ಒಳಪಡಿಸಲು ತಿಳಿಸಿದೆ. ಮಂಕಿಪಾಕ್ಸ್ ಗುಣಲಕ್ಷಣಗಳು ಇದ್ದರೆ ಐಸೊಲೇಷನ್ನಲ್ಲಿ ಇಡಲು ತಿಳಿಸಲಾಗಿದೆ. ಸಿಲಿಕಾನ್ ಸಿಟಿಗೆ ದಿನನಿತ್ಯ ಬೇರೆ ದೇಶದಿಂದ ಬರುವ ನೂರಾರು ಪ್ರಯಾಣಿಕರ ಮೇಲೆ ಆರೋಗ್ಯ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಹೀಗಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇನ್ಮುಂದೆ ಶಂಕಿತರ ಟ್ರ್ಯಾಕಿಂಗ್ ಮಾಡಲಾಗುತ್ತದೆ.