newsics.com
ಬೆಂಗಳೂರು: ಈದ್ ಮಿಲಾದ್ ಹಬ್ಬದಂದು ನೃಪತುಂಗ ರಸ್ತೆಯಲ್ಲಿನ ವಾಯ್.ಎಮ್.ಸಿ.ಎ ಮೈದಾನಕ್ಕೆ ಸಾವಿರಾರು ಜನರು ಅಲಂಕೃತ ವಾಹನ ಹಾಗೂ ಮೆರವಣಿಗೆ ಮೂಲಕ ನಗರದ ವಿವಿಧ ಸ್ಥಳಗಳಿಂದ ಬಂದು ಸೇರಲಿದ್ದಾರೆ.
ಹೀಗಾಗಿ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.
ಈದ್-ಮಿಲಾದ್ ಮೆರವಣಿಗೆ ಮಾರ್ಗಗಳು
- ಜಿ.ಸಿ ನಗರ ದರ್ಗಾದಿಂದ ಹೊರಟು ಶಿವಾಜಿನಗರ ಕಂಟೋನ್ ಮೆಂಟ್ ಕಡೆಗೆ ಸಾಗುವುದು.
- ಯಲಹಂಕ ಓಲ್ಡ್ ಟೌನ್ ಮಸೀದಿಯಿಂದ ಯಲಹಂಕ ಓಲ್ಡ್ ಟೌನ್ ಮಸೀದಿಯವರೆಗೆ
- ಹಳೇ ಬಸ್ ನಿಲ್ದಾಣದಿಂದ ಸಣ್ಣ ಅಮಾನಿಕೆರೆಯವರೆಗೆ
- ಸೌತ್ ಎಂಡ್ ಸರ್ಕಲ್ ನಿಂದ ಆರ್.ವಿ ರಸ್ತೆಯಲ್ಲಿ ಲಾಲ್ ಭಾಗ್ ವೆಸ್ಟ್ ಗೇಟ್ ಸರ್ಕಲ್ವರೆಗೆ ಈ ಎಲ್ಲಾ ಮಾರ್ಗಗಳ ಮೂಲಕ ಮೆರವಣಿಗಗಳು ವಾಯ್.ಎಮ್.ಸಿ.ಎ ಮೈದಾನಕ್ಕೆ ಬಂದು ಸೇರುತ್ತವೆ.
ಇತ್ತ ಹಬ್ಬದ ಪ್ರಯುಕ್ತ ಮೆರವಣಿಗೆಯಲ್ಲಿ ಪಾಲಿಸಬೇಕಾದ ಕೆಲ ಸೂಚನೆಗಳನ್ನು ಪೊಲೀಸರು ಹೊರಡಿಸಿದ್ದಾರೆ. ಒಂದು ವೇಳೆ ನಿಬಂಧನೆಗಳನ್ನು ಪಾಲಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸೂಚನೆಗಳು
- ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೆ ಹರಿತವಾದ ವಸ್ತುಗಳನ್ನು ಹೊಂದಿರಬಾರದು.
- ಮೆರವಣಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆಗಳನ್ನು ಬಳಸಬಾರದು.
- ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು.
- ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು.
- ಮೆರವಣಿಗೆಯ ಸಮಯದಲ್ಲಿ ಆಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.
ಒಂದು ವೇಳೆ ಈ ನಿಬಂಧನೆಗಳನ್ನು ಪಾಲಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.