ವೇದಿಕೆಗೆ ನುಗ್ಗಿದ ಯುವಕ, ಶಾಲು ಎಸೆದು ಹೈಡ್ರಾಮಾ, ಸಿಎಂ ಕಾರ್ಯಕ್ರಮದಲ್ಲಿ ಮತ್ತೆ ಭದ್ರತಾ ವೈಫಲ್ಯ

newsics.com ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬ ವೇದಿಕೆಗೆ ನುಗ್ಗಿ ಹೈಡ್ರಾಮಾ ಸೃಷ್ಟಿಸಿದ್ದಾನೆ. ಇದರಿಂದ ಸಿಎಂ ಕಾರ್ಯಕ್ರಮದಲ್ಲಿ ಮತ್ತೆ ಭದ್ರತಾ ವೈಫಲ್ಯ ಉಂಟಾಗಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಭಾನುವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾರಿತ್ರಿಕ ಮಾನವ ಸರಪಳಿ ಚಳವಳಿ ಕಾರ್ಯಕ್ರಮವನ್ನು ಉದ್ಘಾಟಿಸುವ ವೇಳೆ ಈ ಭದ್ರತಾ ವೈಫಲ್ಯ ಸಂಭವಿಸಿದೆ. ಕಾರ್ಯಕ್ರಮ ವೇಳೆ ವ್ಯಕ್ತಿಯೊಬ್ಬ ವೇದಿಕೆಗೆ ಜಂಪ್ ಮಾಡಿದ್ದಾನೆ. ಶಾಲು ಹಾಕಿಕೊಂಡಿದ್ದ ವ್ಯಕ್ತಿ ಏಕಾಏಕಿ ವೇದಿಕೆಗೆ ನುಗ್ಗಿ ಬಂದಿದ್ದಾನೆ. ಅರೆಕ್ಷಣ ಸಿಎಂ ಹಾಗೂ … Continue reading ವೇದಿಕೆಗೆ ನುಗ್ಗಿದ ಯುವಕ, ಶಾಲು ಎಸೆದು ಹೈಡ್ರಾಮಾ, ಸಿಎಂ ಕಾರ್ಯಕ್ರಮದಲ್ಲಿ ಮತ್ತೆ ಭದ್ರತಾ ವೈಫಲ್ಯ