newsics.com
ಬೆಳಗಾವಿ: ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯವೆಸಗಿದ್ದ ಚಿಕ್ಕೋಡಿಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಶಿಕ್ಷಕ ಮೊಹಮ್ಮದ್ ಸಾದಿಕ್ ಮಿಯಾ ಬೇಗ್ ಬಂಧಿತ ಆರೋಪಿ. ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರದಿದ್ದಾನೆ.
ಶೌಚಕ್ಕೆ ಹೋಗುವ ಖಾಸಗಿ ಅಂಗಾಂಗದ ಫೋಟೋ ತೆಗೆದುಕೊಂಡು ಬರುವಂತೆ ವಿದ್ಯಾರ್ಥಿನಿಯರಿಗೆ ಶಿಕ್ಷಕ ಮೊಹಮ್ಮದ್ ಸಾದಿಕ್ ಹೇಳುತ್ತಿದ್ದನು. ಈ ಫೋಟೋಗಳನ್ನು ತನ್ನ ಮೊಬೈಲ್ನಲ್ಲಿ ಇಟ್ಟುಕೊಂಡಿದ್ದ. ಬಂಧಿತ ಶಿಕ್ಷಕ ಮೊಹಮ್ಮದ್ ಸಾದಿಕ್ ಮೊಬೈಲ್ನಲ್ಲಿ 300ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಳ ಫೋಟೋಗಳೂ ಪತ್ತೆಯಾಗಿವೆ. ಶಿಕ್ಷಕ ಮೊಹಮ್ಮದ್ ಸಾದಿಕ್ ಮೊಬೈಲ್ನಲ್ಲಿ 100ಕ್ಕೂ ಹೆಚ್ಚು ಫೋಟೋಗಳು ಪತ್ತೆಯಾಗಿವೆ. ಕಳೆದ ಒಂದು ವರ್ಷದಿಂದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥನಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ ಮೊಹಮ್ಮದ್ ಸಾದಿಕ್ ವಿರುದ್ಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಬಂಧಿತ ಶಿಕ್ಷಕ ಮೊಹಮ್ಮದ್ ಸಾದಿಕ್ ಮಿಯಾ ಬೇಗ್ ಸೇವೆಯಿಂದ ಅಮಾನತ್ತು ಮಾಡಿ ಚಿಕ್ಕೋಡಿ ಡಿಡಿಪಿಐ ಬಿ.ಎ ಮೇಕನಮರಡಿ ಆದೇಶ ಹೊರಡಿಸಿದ್ದಾರೆ.
ದರ್ಶನ್ ಸೆಲ್ ಗೆ ಟಿವಿ ಬರೋದ್ಯಾವಾಗ?; ಹೊರ ಜಗತ್ತಿನ ಮಾಹಿತಿ ತಿಳಿಯಲು ಕಾತುರ!
ಸದ್ಯದಲ್ಲೇ ಕಾಣಲಿದ್ದಾನೆ ಪುಟ್ಟ ಚಂದ್ರಮ! 56 ದಿನ ಎರಡೆರಡು ಚಂದ್ರ ದರ್ಶನ!