newsics.com
ಕಲಬುರಗಿ: ಕಲಬುರಗಿಯನ್ನು 1685 ಕೋಟಿ ರೂ. ವೆಚ್ಚದ ಯೋಜನೆಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದಲೇ ಸ್ಮಾರ್ಟ್ ಸಿಟಿಯನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಈ ಕುರಿತು ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ. ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿ ಪಡಿಸಲು ಯೋಜನೆ ಹಾಗೂ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 1 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.