newsics.com
ದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ.
ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಕೇಜ್ರಿವಾಲ್ ,ಭಾನುವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ‘ಎರಡು ದಿನಗಳಲ್ಲಿ’ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದರು. ಸಾರ್ವಜನಿಕರು ತಮ್ಮ ಪ್ರಾಮಾಣಿಕತೆಯನ್ನು ದೃಢಪಡಿಸುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದ ಅವರು ಜೈಲಿನಿಂದ ಹೊರಬಂದ ನಂತರ “ಅಗ್ನಿ ಪರೀಕ್ಷೆ”ಗೆ ಒಳಗಾಗುವ ಇಂಗಿತವನ್ನು ವ್ಯಕ್ತಪಡಿಸಿದರು.