newsics.com
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿದ ಆರೋಪದಲ್ಲಿ ಶಾಸಕ ಮುನಿರತ್ನ ಜೈಲುಪಾಲಾಗಿದ್ದಾರೆ.
2 ದಿನ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಮುನಿರತ್ನರನ್ನ ಇಂದು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಶಾಸಕ ಮುನಿರತ್ನ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ನಾಳೆವರೆಗೂ ಮುನಿರತ್ನರನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಸದ್ಯ ಮುನಿರತ್ನ ಅವರನ್ನು ಪರಪ್ಪನ ಆಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ.