newsics. Comಬೆಂಗಳೂರು : ಅಕ್ಟೋಬರ್ 3 ರಿಂದ ಆರಂಭವಾಗಿರುವ ಮಹಿಳಾ ಟಿ20 ವಿಶ್ವಕಪ್ ಪರಿಷ್ಕೃತ ವೇಳಾಪಟ್ಟಿಯನ್ನು ಐಸಿಸಿ ಇಂದು ಪ್ರಕಟಿಸಿದೆ.ವಾಸ್ತವವಾಗಿ ಮಹಿಳೆಯರ ಟಿ20 ವಿಶ್ವಕಪ್ ಅನ್ನು ಆರಂಭದಲ್ಲಿ ಬಾಂಗ್ಲಾದೇಶದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಅಲ್ಲಿ ಹದಗ್ಗೆಟ್ಟ ಪರಿಸ್ಥಿತಿಗಳಿಂದಾಗಿ ಈ ಚುಟುಕು ಸಮರವನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ವರ್ಗಾಯಿಸಲಾಯಿತು.ಈ ಟೂರ್ನಿಯ ಪಂದ್ಯಗಳು ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ಮತ್ತು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಅಕ್ಟೋಬರ್ 3 ರಂದು ಆರಂಭವಾಗಲಿರುವ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.
https://twitter.com/ICC/status/1835961369985700230
ಮಹಿಳಾ ಟಿ20 ವಿಶ್ವಕಪ್ ಪರಿಷ್ಕೃತ ವೇಳಾಪಟ್ಟಿ ಪ್ರಕಟ