newsics.com
ತಿರುಪತಿ: ಇಲ್ಲಿನ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಲಡ್ಡುಗಳನ್ನು ಪ್ರಸಾದವಾಗಿ ವಿತರಿಸಲು ದನದ ಕೊಬ್ಬು, ಮೀನಿನ ಎಣ್ಣೆ ಮತ್ತು ತಾಳೆ ಎಣ್ಣೆಯನ್ನು ಬಳಸಲಾಗುತ್ತಿತ್ತು ಎನ್ನುವುದು ದೃಢಪಟ್ಟಿದೆ ಎಂದು ವರದಿಯಾಗಿದೆ.
ಲ್ಯಾಬ್ ರಿಪೋರ್ಟ್‌ನಲ್ಲೂ ಈ ಅಂಶ ಪತ್ತೆಯಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ಕುರಿತಾದ ದಾಖಲೆಯನ್ನೂ ಕೂಡ ಬಹಿರಂಗ ಮಾಡಿವೆ.
ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪ ಮಾಡಿದ್ದರು.
ಇದರ ನಡುವೆಯೇ ಆಘಾತಕಾರಿ ಟೆಸ್ಟ್ ರಿಪೋರ್ಟ್ ಸಂಚಲನ ಸೃಷ್ಟಿಸಿದೆ. ಆದರೆ, ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿ ಪಕ್ಷ ಆರೋಪವನ್ನು ನಿರಾಕರಿಸಿದೆ.