newsics.com
ಬೆಂಗಳೂರು: ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ(84) ಗುರುವಾರ ನಿಧನರಾದರು.
ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹೊಸಕೋಟೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣನವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದರು. ಆದರೆ ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದು ಸಂಚಲನ ಸೃಷ್ಟಿಸಿದ್ದರು. ಅಷ್ಟೇ ಅಲ್ಲದೆ, ಈಗಿನ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಕೂಡ ಕವಿಷನ್ ಆರೋಪ ಮಾಡಿದ್ದರು. ರಾಜ್ಯದ ಗುತ್ತಿಗೆದಾರರ ಪರ ಹೋರಾಟ ನಡೆಸಿಕೊಂಡು ಬಂದಿದ್ದರು.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಅಂದು ವಿರೋಧ ಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕೆಂಪಣ್ಣ ಕಾರಣವಾಗಿದ್ದರು.
ಕೆಂಪಣ್ಣನವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.
ನೀವು ಮಲಗೋದು ಹೇಗೆ? ನಿಮ್ಮ ನಿದ್ರಾ ಭಂಗಿಯಿಂದಲೇ ಗೊತ್ತಾಗತ್ತೆ ನಿಮ್ಮ ವ್ಯಕ್ತಿತ್ವ!