ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ ಕಡ್ಡಾಯ‌ ಬಳಕೆಗೆ ಸರ್ಕಾರ ಸೂಚನೆ

newsics.com ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಸರ್ಕಾರ ಸೂಚನೆ ನೀಡಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಕೆ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ಇನ್ನು ಮುಂದೆ ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ … Continue reading ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ ಕಡ್ಡಾಯ‌ ಬಳಕೆಗೆ ಸರ್ಕಾರ ಸೂಚನೆ