newsics.com
ಬೆಳಗಾವಿ: ರೋಗಿ ಕೊಳಲು ನುಡಿಸುತ್ತಾ ಮಾತನಾಡುತ್ತಿರುವಾಗಲೇ ಮಿದುಳಿನ ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ಬೆಳಗಾವಿಯ ಕೊಲ್ಲಾಪುರ ಕನೇರಿ ಮಠದ ಸಿದ್ಧಗಿರಿ ಆಸ್ಪತ್ರೆಯಲ್ಲಿ ನಡೆದಿದೆ.
ಮಿದುಳು ಕ್ಯಾನ್ಸರ್ ನಿಂದ ಬಳಲುತ್ತಿದ್ದ ವ್ಯಕ್ತಿಯ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆ ನಡೆಸುವಾಗ ಮಿದುಳಿಗೆ ಅರಿವಳಿಕೆ ನೀಡಿರಲಿಲ್ಲ. ಹೀಗಾಗಿ ರೋಗಿ ಸಂಪೂರ್ಣವಾಗಿ ಪ್ರಜ್ಞಾ ಸ್ಥಿತಿಯಲ್ಲೇ ಇದ್ದರು. ಕೇವಲ ಮಿದುಳಿನ ಭಾಗದ ಹೊರಭಾಗದಲ್ಲಿ ಮಾತ್ರ ಅರಿವಳಿಕೆ ನೀಡಲಾಗಿತ್ತು. ಐದು ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ವೇಳೆ ರೋಗಿ ನಿರಂತರವಾಗಿ ಕೊಳಲು ನುಡಿಸುತ್ತಿದ್ದರು.
ಸುದ್ದಿಗೋಷ್ಠಿಯಲ್ಲಿ ಶಸ್ತ್ರಚಿಕಿತ್ಸೆ ಕುರಿತು ಮಾಹಿತಿ ನೀಡಿದ ನರ ಡಾ। ಶಿವಶಂಕರ ಮರಜಕ್ಕೆ, ಹಳ್ಳಿ ಭಾಗದಲ್ಲಿ ಇಂಥ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮಾಡಿರುವ ದೇಶದ ಕೆಲವೇ ಆಸ್ಪತ್ರೆಗಳಲ್ಲಿ ಇದೂ ಒಂದು. ಬೇರೆ ಕಡೆಗೆ ಇದಕ್ಕೆ 10ರಿಂದ 15 ಲಕ್ಷ ರೂ. ವೆಚ್ಚ ಆಗುತ್ತದೆ. ನಮ್ಮಲ್ಲಿ ಕೇವಲ 1.20 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.