Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖಾಸಗಿ‌ ಕಾಲೇಜು ಲೇಡೀಸ್ ಟಾಯ್ಲೆಟ್‌ನಲ್ಲಿ ವಿಡಿಯೋ ಚಿತ್ರೀಕರಣ: 8 ಸಾವಿರ‌ ಕ್ಲಿಪಿಂಗ್ಸ್ ಹೊಂದಿದ್ದವನ ಬಂಧನ
ಕರ್ನಾಟಕಪ್ರಮುಖ

ಖಾಸಗಿ‌ ಕಾಲೇಜು ಲೇಡೀಸ್ ಟಾಯ್ಲೆಟ್‌ನಲ್ಲಿ ವಿಡಿಯೋ ಚಿತ್ರೀಕರಣ: 8 ಸಾವಿರ‌ ಕ್ಲಿಪಿಂಗ್ಸ್ ಹೊಂದಿದ್ದವನ ಬಂಧನ

Share
1 Min Read
SHARE

newsics.com

ಬೆಂಗಳೂರು: ಖಾಸಗಿ ಕಾಲೇಜಿನ ಮಹಿಳೆಯರ ಟಾಯ್ಲೆಟ್ ರೂಮ್‌ನಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ.

ಕಾಲೇಜಿನ ಲೇಡೀಸ್ ಟಾಯ್ಲೆಟ್ ರೂಮ್‌ನಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಇದನ್ನು ಗಮನಿಸಿದ್ದಾಳೆ.

ಟಾಯ್ಲೆಟ್‌ ಒಳಗಡೆ ಕ್ಯಾಮೆರಾ ಇರುವುದನ್ನು ನೋಡಿ ವಿದ್ಯಾರ್ಥಿನಿ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾಳೆ. ಈ ವೇಳೆ ಕ್ಯಾಮೆರಾ ಇಟ್ಟ ಕುಶಾಲ್ ಎಂಬ ವಿದ್ಯಾರ್ಥಿಯನ್ನು ಇತರ ವಿದ್ಯಾರ್ಥಿಗಳು ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾರೆ.

ಮೈಸೂರು ರಸ್ತೆಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ.
ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಕುಂಬಳಗೂಡು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ.

ಕುಶಾಲ್‌ ಸಿಸಿಟಿವಿ ಮಾದರಿಯ ಕ್ಯಾಮರಾ ಇಟ್ಟಿದ್ದ ಎಂದು ಹೇಳಲಾಗುತ್ತಿದೆ. ಅದೇ ಕಾಲೇಜಿನ (ACS) ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕುಶಾಲ್‌ ಓದುತ್ತಿದ್ದು, ಆತನಿಂದಲೇ ಈ ಕೃತ್ಯ ನಡೆದಿದೆ ಎಂದು ಆರೋಪ ಮಾಡಿದ ಬಳಿಕ, ಕ್ಯಾಮೆರಾ ಇಟ್ಟಿದ್ದ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಯ ಬಳಿ ವಿದ್ಯಾರ್ಥಿನಿಯರ ಒಟ್ಟು 8 ಸಾವಿರ ವಿಡಿಯೋ ಕ್ಲಿಪ್‌ಗಳಿವೆ ಎಂದು ಹೇಳಲಾಗುತ್ತಿದೆ. ಕೆಲ ತಿಂಗಳಿಂದ ವೀಡಿಯೋ ರೆಕಾರ್ಡ್ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಈ ಘಟನೆಯಿಂದ ವಿದ್ಯಾರ್ಥಿನಿಯರು ಆತಂಕದಲ್ಲಿದ್ದಾರೆ. ಘಟನೆಯ ಬಗ್ಗೆ ಪೋಷಕರಿಗೂ ವಿದ್ಯಾರ್ಥಿನಿಯರು ಮಾಹಿತಿ ನೀಡಿದ್ದಾರೆ.

ಮಹಿಳೆ ಬಗ್ಗೆ ಲಘುವಾಗಿ ಮಾತಾಡಿದ ಹೈಕೋರ್ಟ್ ಜಡ್ಜ್‌ಗೆ ಸುಪ್ರೀಂ ತರಾಟೆ, ವರದಿಗೆ ಸೂಚನೆ

ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ ಕಡ್ಡಾಯ‌ ಬಳಕೆಗೆ ಸರ್ಕಾರ ಸೂಚನೆ

ಮಾವ ನನ್ನನ್ನು ಅಸಭ್ಯವಾಗಿ ಮುಟ್ಟಿದ! ಸೊಸೆಯ ದೂರಿನ ಮೇರೆಗೆ ಪ್ರಧಾನ ಅರ್ಚಕ ಅಮಾನತು

TAGGED:000 clippings arrestedVideo shooting in girls' toilet: Man with 8
Share This Article
Facebook Twitter Copy Link Print
Previous Article ಮಹಿಳೆ ಬಗ್ಗೆ ಲಘುವಾಗಿ ಮಾತಾಡಿದ ಹೈಕೋರ್ಟ್ ಜಡ್ಜ್‌ಗೆ ಸುಪ್ರೀಂ ತರಾಟೆ, ವರದಿಗೆ ಸೂಚನೆ
Next Article ಹೆಣ್ಣು ಕೊಟ್ಟ ಅತ್ತೆ, ಮಾವನನ್ನೇ ಕೊಂದ ಪಾಪಿ ಅಳಿಯ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?